ಕಣ್ಣೂರು: ರಾಜ್ಯದಲ್ಲಿ ಮತ್ತೊಬ್ಬರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಕಣ್ಣೂರು ಮೂಲದ 31 ವರ್ಷದ ವ್ಯಕ್ತಿಯೊಬ್ಬರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದೆ. ಸದ್ಯ ಕಣ್ಣೂರು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಯ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಸಂಪರ್ಕದಲ್ಲಿರುವವರು ನಿಗಾದಲ್ಲಿದ್ದಾರೆ.
ಮೇ 13ರಂದು ದುಬೈನಿಂದ ಬಂದಿಳಿದಿದ್ದ ಯುವಕನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ರಾತ್ರಿ ಐಸೊಲೇಶನ್ ವಾರ್ಡ್‍ಗೆ ದಾಖಲಾಗಿದ್ದ ಯುವಕನ ಜೊಲ್ಲನ್ನು ಪುಣೆಯ ವೈರಾಲಜಿ ಲ್ಯಾಬ್ ಮತ್ತು ಅಲಪ್ಪುಳದ ಲ್ಯಾಬ್‍ಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು.
ಜುಲೈ 14 ರಂದು ರಾಜ್ಯದಲ್ಲಿ ಮೊದಲ ಬಾರಿಗೆ ಮಂಗನ ಕಾಯಿಲೆ ದೃಢಪಟ್ಟಿದ್ದು, ಯುಎಇಯಿಂದ ಬಂದಿದ್ದ ಕೊಲ್ಲಂ ಮೂಲದವರಲ್ಲಿ ರೋಗ ಪತ್ತೆಯಾಗಿತ್ತು.