ಪಾಲಕ್ಕಾಡ್: ಮುಂದುವರಿದ ಭಾರೀ ಮಳೆಯಿಂದಾಗಿ ಹೆಚ್ಚಿನ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಬುಧವಾರ) ರಜೆ ಘೋಷಿಸಲಾಗಿದೆ.
ರಾಜ್ಯದ 10 ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಭಾರೀ ಮಳೆಯ ಸಂದರ್ಭದಲ್ಲಿ ಸಾರ್ವಜನಿಕರು ಜಾಗೃತರಾಗುವಂತೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಅಲಪ್ಪುಳ, ಕೋಯಿಕ್ಕೋಡ್, ತ್ರಿಶೂರ್, ಕೊಟ್ಟಾಯಂ, ಎರ್ನಾಕುಳಂ, ಮಲಪ್ಪುರಂ, ಇಡುಕ್ಕಿ, ಪತ್ತನಂತಿಟ್ಟ, ಪಾಲಕ್ಕಾಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. ಜಿಲ್ಲೆಗಳಲ್ಲಿ ಅಂಗನವಾಡಿಗಳು ಮತ್ತು ವೃತ್ತಿಪರ ಕಾಲೇಜುಗಳಿಗೂ ರಜೆ ನೀಡಲಾಗಿದೆ. ವಯನಾಡ್ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ. ಪೂರ್ವ ನಿಗದಿತ ಪರೀಕ್ಷೆಗಳು ಮತ್ತು ಸಂದರ್ಶನಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯವು ನಾಳೆ ನಡೆಸಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಈ ಕುರಿತು ಪರೀಕ್ಷಾ ನಿಯಂತ್ರಕರು ಮಾಹಿತಿ ನೀಡಿದ್ದಾರೆ. ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಭಾರೀ ಮಳೆ; 10 ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ
0
ಆಗಸ್ಟ್ 02, 2022
Tags