ಜೈಪುರ: ಮುಖ್ಯಮಂತ್ರಿ ಡಿಜಿಟಲ್ ಸೇವಾ ಯೋಜನೆ ಅಡಿಯಲ್ಲಿ 1.35 ಕೋಟಿ ಮಹಿಳೆಯರಿಗೆ ಸ್ಮಾರ್ಟ್ ಫೋನ್‌ಗಳನ್ನು ನೀಡುವ ಯೋಜನೆ ಸಂಬಂಧ ದೇಶದ ಪ್ರಮುಖ ಮೂರು ದೂರ ಸಂಪರ್ಕ ಕಂಪನಿಗಳು ಆಸಕ್ತಿ ತೋರಿಸಿವೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದರು.
'ಬುಧವಾರ ಬಿಡ್‌ಗಳನ್ನು ತೆರೆಯಲಾಗಿದೆ. ಬಿಡ್ಡರ್‌ಗಳ ಕುರಿತು ಉನ್ನತ ಮಟ್ಟದ ಸಮಿತಿಯು ಈ ತಿಂಗಳು ನಿರ್ಧಾರ ಕೈಗೊಳ್ಳಲಿದೆ' ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
'ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನವೇ ಈ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಇಚ್ಛಿಸಿದೆ. ಈ ವರ್ಷದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಈ ಯೋಜನೆಯನ್ನು ಘೋಷಿಸಿದ್ದರು. ಇದಕ್ಕಾಗಿ 12,000 ಕೋಟಿ ಖರ್ಚಾಗಲಿದೆ' ಎಂದು ಹೇಳಿದ್ದರು.