ನವದೆಹಲಿ: 2023ರ ಸಾಲಿನ ಪದ್ಮ ಪುರಸ್ಕಾರಗಳಿಗೆ ಸೆಪ್ಟೆಂಬರ್ 15ರ ವರೆಗೆ ಆನ್‌ಲೈನ್ ಮೂಲಕ ನಾಮನಿರ್ದೇಶನ ಮತ್ತು ಶಿಫಾರಸು ಮಾಡಬಹುದು ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಹೇಳಿದೆ.
ಸಾರ್ವಜನಿಕರು ನಾಮನಿರ್ದೇಶನ ಮತ್ತು ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್ ( https://awards.gov.in ) ಮೂಲಕ ಸಲ್ಲಿಸಬಹುದು ಎಂದೂ ಪ್ರಕಟಣೆಯಲ್ಲಿ ತಿಳಿಸಿದೆ.