ರೇವಾ: ಮಧ್ಯ ಪ್ರದೇಶದ ರೇವಾ ನಗರದಲ್ಲಿ ಕಳೆದ ಎರಡು ವಾರಗಳ ಅವಧಿಯಲ್ಲಿ 2,000 ಕ್ಕೂ ಅಧಿಕ ಹಂದಿಗಳು ಮೃತಪಟ್ಟಿವೆ. ಇದಕ್ಕೆ ಆಫ್ರಿಕನ್ ಹಂದಿ ಜ್ವರವೇ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಂದಿ ಜ್ವರದ ಹರಡುವಿಕೆ ತಡೆಗಟ್ಟಲು ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಹಲವು ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ರೇವಾ ಪ್ರದೇಶದಲ್ಲಿ ಸೆಕ್ಷನ್ 144 ವಿಧಿಸಲಾಗಿದ್ದು, ಹಂದಿಗಳನ್ನು ಸಾಗಿಸುವುದು, ಖರೀದಿಸುವುದು, ಮಾಂಸ ಮಾಡುವುದು ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.
ಪ್ರಾಣಿಗಳ ಮೂಲಕ ಹರಡಬಹುದಾದ ಸಾಂಕ್ರಾಮಿಕ ಕಾಯಿಲೆ ಇದಾಗಿದ್ದು, ಕೇಂದ್ರದ ಮಾರ್ಗಸೂಚಿಯಂತೆ ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ.