ಮಂಗಳೂರು: ಸೆ.2ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಪ್ರಧಾನಿ ಅವರಿಂದ ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆ ಉದ್ಘಾಟನೆಯಾಗಲಿದೆ. ಬಳಿಕ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.