ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರು. ಇಳಿಕೆ ಮಾಡಲಾಗಿದೆ.
ಇದರೊಂದಿಗೆ ವಾಣಿಜ್ಯ ಬಳಕೆಯ 19 ಕೆ.ಜಿ. ಎಲ್‌ಪಿಜಿ ಸಿಲಿಂಡರ್ ದರ 2012.50ಕ್ಕೆ ಬದಲಾಗಿ 1,976 ರು. ಆಗಿದೆ. ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗಲಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.
ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜುಲೈ 1ರಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 198 ರು. ಕಡಿತ ಮಾಡಿದ್ದವು. ಅದಕ್ಕೂ ಮೊದಲು ಜೂನ್ 1ರಂದು 135 ರು. ದರ ಇಳಿಕೆ ಮಾಡಲಾಗಿತ್ತು.