HEALTH TIPS

ಸಿಯುಇಟಿ: 4ನೇ ಹಂತದಲ್ಲೂ ತಾಂತ್ರಿಕ ಲೋಪ

 

             ನವದೆಹಲಿ: ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಬುಧವಾರದಿಂದ ಆರಂಭವಾದ ನಾಲ್ಕನೇ ಹಂತದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲೂ (ಸಿಯುಇಟಿ- ಯುಜಿ) ತಾಂತ್ರಿಕ ಲೋಪಗಳು ಮುಂದುವರಿದಿದ್ದು, ಕೆಲ ಕೇಂದ್ರಗಳಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ.

                ದೆಹಲಿಯ ಗುರು ಹರಗೋವಿಂದ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಅಂಡ್‌ ಇನ್‌ಫರ್ಮೇಷನ್‌ ಟೆಕ್ನಾಲಜಿ, ಜಸೋಲಾದ (ದೆಹಲಿ) ಏಷ್ಯಾ ಪೆಸಿಫಿಕ್‌ ಇನ್‌ಸ್ಟಿಟ್ಯೂಟ್ ಸೇರಿದಂತೆ ದೆಹಲಿಯ ಹಲವು ಕೇಂದ್ರಗಳಲ್ಲಿ ತಾಂತ್ರಿಕ ಲೋಪಗಳು ಎದುರಾಗಿವೆ. ಕೆಲ ಕೇಂದ್ರಗಳಲ್ಲಿ ಈ ಲೋಪದಿಂದಾಗಿ ಪರೀಕ್ಷೆ ಎರಡು ತಾಸು ವಿಳಂಬವಾಗಿ ಆರಂಭವಾಗಿದೆ.

               'ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಸರ್ವರ್‌ ಸಮಸ್ಯೆ ಕಾಣಿಸಿಕೊಂಡಿತ್ತು. ಇದರಿಂದಾಗಿ ತೊಂದರೆಗೆ ಒಳಗಾದ ಎಲ್ಲ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು' ಎಂದು ಯುಜಿಸಿ ಅಧ್ಯಕ್ಷ ಜಗದೀಶ್‌ ಕುಮಾರ್‌ ಪ್ರತಿಕ್ರಿಯಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries