ತಿರುವನಂತಪುರ: ಅರಬ್ಬಿ ಸಮುದ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮುದ್ರ ಪ್ರಕ್ಷುಬ್ಧತೆ ಮತ್ತು ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಕೇಂದ್ರ ಹವಾಮಾನ ಇಲಾಖೆ ಹಾಗೂ ರಾಷ್ಟ್ರೀಯ ಸಾಗರ ಸಂಶೋಧನಾ ಕೇಂದ್ರದ ಎಚ್ಚರಿಕೆ ಆಗಸ್ಟ್ 4ರವರೆಗೆ ಜಾರಿಯಲ್ಲಿರುತ್ತದೆ. ಸೋಮವಾರ ಬೆಳಗ್ಗೆಯಿಂದ ಅರಬ್ಬಿ ಸಮುದ್ರದಲ್ಲಿ ಒಂದು ಮೀಟರ್‍ಗೂ ಹೆಚ್ಚು ಅಲೆಗಳು ಏಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಐದು ದಿನಗಳ ಕಾಲ ಮೀನುಗಾರಿಕೆ ನಡೆಸದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಭಾನುವಾರ ಮಧ್ಯರಾತ್ರಿ ಟ್ರೋಲಿಂಗ್ ನಿμÉೀಧ ಕೊನೆಗೊಂಡಿದೆ. ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯುವ ಸಂಭವವಿರುವುದರಿಂದ ಮೀನುಗಾರಿಕೆ ಇಲಾಖೆ ಹಾಗೂ ಕರಾವಳಿ ಕಾವಲು ಸಿಬ್ಬಂದಿ ವಿಶೇಷ ನಿಗಾ ವಹಿಸಬೇಕು. ಮುಂದಿನ ಐದು ದಿನಗಳ ಕಾಲ ಅರಬ್ಬಿ ಸಮುದ್ರದಲ್ಲಿ ಯಾವುದೇ ಸಂದರ್ಭದಲ್ಲೂ ಮೀನುಗಾರಿಕೆ ನಡೆಸಬಾರದು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಉಬ್ಬರವಿಳಿತದ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚಾಗಿದೆ ಎಂದು ಎಚ್ಚರಿಕೆಯಲ್ಲಿ ಹೇಳಲಾಗಿದೆ. ಅತಿವೃಷ್ಟಿ, ಉಬ್ಬರವಿಳಿತದ ಸಂದರ್ಭದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿರುವುದರಿಂದ ವಿಶೇಷ ಎಚ್ಚರಿಕೆ ವಹಿಸಬೇಕು. ಏತನ್ಮಧ್ಯೆ, ಮುಂದಿನ ನಾಲ್ಕು ದಿನಗಳವರೆಗೆ ವಿವಿಧ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಎಚ್ಚರಿಕೆ:
01-08-2022: ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ.
02-08-2022: ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್.
03-08-2022: ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್.
04-08-2022: ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು.
ಯೆಲ್ಲೋ ಎಚ್ಚರಿಕೆ:
01-08-2022: ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು.
02-08-2022: ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು.
03-08-2022: ಕಣ್ಣೂರು, ಕಾಸರಗೋಡು.
04-08-2022: ತಿರುವನಂತಪುರ, ಕೊಲ್ಲಂ.
ಸಮುದ್ರ ಪ್ರಕ್ಷುಬ್ಧ ಸಾಧ್ಯತೆ; 5 ದಿನಗಳವರೆಗೆ ಮೀನುಗಾರಿಕೆ ನಿಷೇಧ
0
ಆಗಸ್ಟ್ 02, 2022