HEALTH TIPS

76ನೇ ಸ್ವಾತಂತ್ರ್ಯೋತ್ಸವ; ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

ನವದೆಹಲಿ: 76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸತತ 9ನೇ ಬಾರಿಗೆ ತ್ರಿವರ್ಣ ಧ್ವಜಾರೋಹಣ ಮಾಡಿದ್ದು, ಹಿರಿಯ ಸಚಿವರು, ಅಧಿಕಾರಿಗಳು ಮತ್ತು ಲಕ್ಷಾಂತರ ಪ್ರೇಕ್ಷಕರ ಉಪಸ್ಥಿತಿಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಂತೆಯೇ ಭಾರತೀಯ ಸೇನೆಯ ವಿಶೇಷ ಪಡೆಗಳಿಂದ ಅವರು ಗಾರ್ಡ್ ಆಫ್ ಹಾನರ್ ಸ್ವೀಕರಿಸಿದರು. ಬಳಿಕ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುತ್ತಲೇ ವಾಯುಸೇನೆಯ ಹೆಲಿಕಾಪ್ಟರ್ ಗಳಿಂದ ಧ್ವಜಕ್ಕೆ ಪುಷ್ಪವೃಷ್ಟಿ ಸುರಿಸಿ ಗೌರವ ಸಲ್ಲಿಸಲಾಯಿತು.

ಪ್ರಧಾನಿ ಮೋದಿಗೆ ರಾಜನಾಥ್ ಸಿಂಗ್ ಸ್ವಾಗತ


ಇದಕ್ಕೂ ಮೊದಲು ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ರಕ್ಷಣಾ ಇಲಾಖೆ ರಾಜ್ಯ ಸಚಿವ ಅಜಯ್ ಭಟ್ ಅವರು ಸ್ವಾಗತಿಸಿದರು. 

ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರಪಿತ ಮಹಾತ್ಮಾಗಾಂಧಿ ಅವರ ಸ್ಮಾರಕ ರಾಜ್ ಘಾಟ್ ಗೆ ತೆರಳಿ ಪುಷ್ಪನಮನ ಸಲ್ಲಿಸಿದರು. 


76ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯ ಭಾಗವಾಗಿ ಕೇಂದ್ರ ಸರ್ಕಾರವು ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಧಾನಿ ಮೋದಿ ಅವರು ಸ್ವಾತಂತ್ರ್ಯ ಭಾಷಣದಲ್ಲೇ ಸರ್ಕಾರದ ಪ್ರಮುಖ ಯೋಜನೆಗಳನ್ನು ಘೋಷಿಸುತ್ತಾರೆ. ಕಳೆದ ವರ್ಷ ಅವರು ರಾಷ್ಟ್ರೀಯ 'ಹೈಡ್ರೋಜನ್ ಮಿಷನ್', 'ಗತಿ ಶಕ್ತಿ ಮಾಸ್ಟರ್ ಪ್ಲ್ಯಾನ್' ಇತ್ಯಾದಿ ಯೋಜನೆಗಳನ್ನು ಘೋಷಿಸಿದ್ದರು.

ಸೋಮವಾರ ಸುಮಾರು 250 ಗಣ್ಯ ವ್ಯಕ್ತಿಗಳು ಕೆಂಪು ಕೋಟೆಗೆ ಆಗಮಿಸಿದ್ದು, ಸುಮಾರು 8,000-10,000 ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಭಾರತದ ಸ್ವಾತಂತ್ರ್ಯದ 75 ವರ್ಷಗಳ ಸಂಭ್ರಮ ಆಚರಿಸಲು ಕಳೆದ 75 ವಾರಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries