ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಎರಡನೇ ವರ್ಷದ ಚಾತುರ್ಮಾಸ್ಯ ಸಮಾರಂಭದ ಅಂಗವಾಗಿ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಹಸಿರುವಾಣಿ ಸಮರ್ಪಣಾ ಕಾರ್ಯಕ್ರಮ ಆ. 1ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಈ ಸಂದರ್ಭ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರಿಗೆ ಗುರುನಮನ ಕಾರ್ಯಕ್ರಮ ನಡೆಯುವುದು. ಜತೆಗೆ ನಿವೃತ್ತ ಮುಖ್ಯ ಶಿಕ್ಷಕ, ಬರಹಗಾರ ಅಣಂಗೂರು ಬಾಲಕೃಷ್ಣ ಮಾಸ್ಟರ್ ಅವರಿಗೆ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿಯ ವತಿಯಿಂದ ಕೊಡಮಾಡುವ ಸಮಾಜ ಸೇವಾ ಪ್ರಶಸ್ತಿಯನ್ನು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಪ್ರದಾನ ಮಾಡುವರು.
ಇಂದು ಶ್ರೀ ಎಡನೀರು ಮಠಕ್ಕೆ ಹಸಿರುವಾಣಿ ಸಮರ್ಪಣೆ, ಗುರುನಮನ, ಪ್ರಶಸ್ತಿ ಪ್ರದಾನ
0
ಆಗಸ್ಟ್ 01, 2022
Tags