ಎರ್ನಾಕುಳಂ: ಎರ್ನಾಕುಳಂ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ರೇಣು ರಾಜ್ ವಿರುದ್ಧ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಜಿಲ್ಲಾಧಿಕಾರಿ ಸ್ಪಷ್ಟೀಕರಣ ನೀಡುವಂತೆ ಮನವಿ ಸಲ್ಲಿಸಲಾಗಿದೆ.
ಎರ್ನಾಕುಳಂ ಮೂಲದ ವಕೀಲ ಎಂ.ಆರ್.ಧನಿಲ್ ನ್ಯಾಯಾಲಯದ ಮೆಟ್ಟಿಲೇರಿದ್ದರು.
ರಜೆ ಘೋಷಣೆಯಲ್ಲಿನ ಗೊಂದಲದಿಂದ ತೀವ್ರ ತೊಂದರೆ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಆದ್ದರಿಂದ, ಅರ್ಜಿಯಲ್ಲಿ ರಜಾದಿನಗಳನ್ನು ಘೋಷಿಸಲು ಮಾರ್ಗಸೂಚಿಗಳ ಅಗತ್ಯವಿದೆ ಎಂದಿದ್ದಾರೆ.
ಬೆಳಗ್ಗೆ 8:30ರ ಸುಮಾರಿಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದರು. ಆದರೆ ಅದಕ್ಕೂ ಮುನ್ನವೇ ಶಾಲೆಗಳು ಕಾರ್ಯಾರಂಭ ಮಾಡಿದ್ದವು. ಜಿಲ್ಲಾಧಿಕಾರಿ ತಡವಾಗಿ ಘೋಷಣೆ ಮಾಡಿರುವುದು ಶಿಕ್ಷಕರು ಹಾಗೂ ಪೆÇೀಷಕರಿಗೆ ತೀವ್ರ ತೊಂದರೆ ತಂದಿದೆ. ಜಿಲ್ಲಾಧಿಕಾರಿ ವಿರುದ್ಧ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈಕೋರ್ಟ್‍ನಲ್ಲಿ ಅರ್ಜಿ ಸ್ವೀಕರಿಸಲಾಗಿದೆ.
ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ವಿಳಂಬದ ಘಟನೆ; ಎರ್ನಾಕುಳಂ ಜಿಲ್ಲಾಧಿಕಾರಿ ವಿರುದ್ಧ ಹೈಕೋರ್ಟ್‍ನಲ್ಲಿ ಅರ್ಜಿ
0
ಆಗಸ್ಟ್ 04, 2022