ಗಾಂಧಿನಗರ: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸುಮಾರು ಎರಡು ವಾರಗಳ ನಂತರ, ಗುಜರಾತ್‌ನ ಮಾಜಿ ಸಚಿವ ನರೇಶ್ ರಾವಲ್ ಮತ್ತು ಮಾಜಿ ರಾಜ್ಯಸಭಾ ಸದಸ್ಯ ರಾಜು ಪರ್ಮಾರ್ ಅವರು ಬುಧವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರಿದರು.
ಇಬ್ಬರೂ ನಾಯಕರು ದಶಕಗಳ ಕಾಲ ಕಾಂಗ್ರೆಸ್‌ನೊಂದಿಗೆ ಇದ್ದರು. ಇಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಅವರು ಅವರಿಗೆ ಕೇಸರಿ ಸ್ಕಾರ್ಫ್ ಮತ್ತು ಕ್ಯಾಪ್ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಈ ನರೇಶ್ ರಾವಲ್, ರಾಜು ಪರ್ಮಾರ್ ಅವರ ಬೆಂಬಲಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಪಕ್ಷಕ್ಕೆ ಸೇರ್ಪಡೆಗೊಂಡರು.
1988 ಮತ್ತು 2006 ರ ನಡುವೆ ಮೂರು ಅವಧಿಗೆ ಪರ್ಮಾರ್ ಗುಜರಾತ್‌ನಿಂದ ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾಗಿದ್ದರು. ದಲಿತ ಸಮುದಾಯದ ಪ್ರಮುಖ ನಾಯಕರಾಗಿದ್ದ ಅವರು ಎಸ್‌ಸಿ/ಎಸ್‌ಟಿ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.