ಕೊಯಿಕ್ಕೋಡ್: ಕೇರಳದ ಪೊಲೀಸ್ ಅಧಿಕಾರಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಉಳ್ಳಿಯೇರಿಯಲ್ಲಿರುವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಮೃತ ಹಿರಿಯ ಪೊಲೀಸ್ ಅಧಿಕಾರಿಯನ್ನು ಬಾಜು ಎಂದು ಗುರುತಿಸಲಾಗಿದೆ.
ಇವರು ಕೇರಳದ ಎಳತ್ತೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಉಳ್ಳಿಯೇರಿಯಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಶನಿವಾರ ರಾತ್ರಿ ಬಾಜು ಸಂಬಂಧಿಕರು ಕೂಡಲೇ ಬಾಜು ಅವರನ್ನು ಉಳ್ಳಿಯೇರಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಕೊಯಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ವೈಯಕ್ತಿಕ ಕಾರಣಗಳಿಂದ ದುಡುಕಿನ ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಹೇಳಲಾಗಿದೆ. ಆದರೆ, ಕಾರಣ ಇನ್ನೂ ನಿಗೂಢವಾಗಿದೆ.