ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ನಾಯಕ ಸುನಿಲ್ ಬನ್ಸಾಲ್ ರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಅಧಿಕೃತ ಘೋಷಣೆ ಹೊರಡಿಸಿದ್ದು, ಬಿಜೆಪಿ ನಾಯಕ ಸುನಿಲ್ ಬನ್ಸಾಲ್ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬುಧವಾರ ನೇಮಿಸಲಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಬನ್ಸಾಲ್ ಅವರಿಗೆ ಪಶ್ಚಿಮ ಬಂಗಾಳ, ಒಡಿಶಾ ಮತ್ತು ತೆಲಂಗಾಣ ರಾಜ್ಯಗಳ ಉಸ್ತುವಾರಿಯನ್ನುಕೂಡ ವಹಿಸಲಾಗಿದೆ ಎನ್ನಲಾಗಿದೆ.
ಸುನಿಲ್ ಬನ್ಸಾಲ್ ಅವರು ಉತ್ತರ ಪ್ರದೇಶದಲ್ಲಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಆಗಿದ್ದರು. ಇದೀಗ ಅವರ ಸ್ಥಾನಕ್ಕೆ ಧರಂಪಾಲ್ ಅವರನ್ನು ನೇಮಿಸಲಾಗುವುದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಪಕ್ಷದ ಜಾರ್ಖಂಡ್ ಘಟಕದಲ್ಲಿ ಕರಂವೀರ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.