HEALTH TIPS

ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆ: ಪರೀಕ್ಷೆ ಯಶಸ್ವಿ

 

                      ಹೈದರಾಬಾದ್‌: ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆಯಲ್ಲಿ (ಕ್ಲಿನಿಕಲ್‌ ಟ್ರಯಲ್‌) ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಯು (ಬಿಬಿವಿ154) ಸುರಕ್ಷಿತ ಎಂಬ ವರದಿ ಬಂದಿದೆ ಎಂದು ಭಾರತ್‌ ಬಯೋಟೆಕ್‌ ಇಂಟರ್‌ನ್ಯಾಷನಲ್‌ ಲಿ. (ಬಿಬಿಐಎಲ್‌) ಸೋಮವಾರ ಹೇಳಿದೆ.

‌                      ಮೊದಲನೇ ಮತ್ತು ಎರಡನೇ ಹಂತದ ಪ್ರಾಯೋಗಿಕ ಪರೀಕ್ಷೆಯಲ್ಲೂ ಲಸಿಕೆಯು ಸುರಕ್ಷಿತ ಎಂಬ ವರದಿ ಬಂದಿತ್ತು. ಕಡಿಮೆ ಮತ್ತು ಮಧ್ಯಮ ಆದಾಯ ದೇಶಗಳಿಗಾಗಿ ಮೂಗಿನ ಮೂಲಕ ನೀಡುವ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಕಂಪೆನಿಯು ಪತ್ರಿಕಾ ಹೇಳಿಕೆಯಲ್ಲಿ ಹೇಳಿದೆ.

                      ' ಸ್ವಾತಂತ್ರ್ಯ ದಿವಸದಂದು ಯಶಸ್ವಿ ಪ್ರಾಯೋಗಿಕ ಪರೀಕ್ಷೆಗಳ ಕುರಿತು ಮಾಹಿತ ಹಂಚಿಕೊಳ್ಳಲು ಬಹಳ ಸಂತೋಷವಾಗುತ್ತಿದೆ' ಎಂದು ಭಾರತ್‌ ಬಯೋಟೆಕ್‌ ಜಂಟಿ ನಿರ್ವಾಹಕ ನಿರ್ದೇಶಕಿ ಸುಚಿತ್ರ ಕೆ. ಎಲಾ ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries