ತಿರುವನಂತಪುರ: ಶ್ರೀಲಂಕಾದ ಆರೋಗ್ಯ ಸಚಿವ ಡಾ. ಕೆಹೆಲಿಯಾ ರಂಬುಕ್ ವೆಲ್ಲಾ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದರು.
ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಭೆ ನಡೆಯಿತು. ಮುಖ್ಯ ಕಾರ್ಯದರ್ಶಿ ಡಾ.ವಿ.ಪಿ.ಜೋಯ್ ಹಾಗೂ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಹಕಾರವನ್ನು ಬಲಪಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಾಂಸ್ಕøತಿಕ ವಿನಿಮಯಕ್ಕೆ ಹೊಸ ಅವಕಾಶಗಳನ್ನು ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರನ್ನು ಭೇಟಿಮಾಡಿದ ಶ್ರೀಲಂಕಾದ ಆರೋಗ್ಯ ಸಚಿವ: ಸಹಕಾರ ಬಲಪಡಿಸುವ ಕುರಿತು ಚರ್ಚೆ
0
ಆಗಸ್ಟ್ 27, 2022
Tags