ನವದೆಹಲಿ: ಟೋಲ್ ಗಳಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ದೊರೆಯದ ಹಿನ್ನೆಲೆಯಲ್ಲಿ ಹೊಸ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ.
ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಈಗಾಗಲೇ ಬಹುತೇಕ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸಲಾಗಿದ್ದು, ಹೀಗಿದ್ದರೂ ಸನ್ ಟೋಲ್ ಪ್ಲಾಜಾಗಳಲ್ಲಿ ದಟ್ಟಣೆ ಹೆಚ್ಚಾಗಿರುತ್ತದೆ.
ಹೀಗಾಗಿ ಫಾಸ್ಟ್ ಟ್ಯಾಗ್ ಬದಲಿಗೆ ಸ್ವಯಂ ಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮರಾಗಳನ್ನು ಅಳವಡಿಸುವ ಚಿಂತನೆ ನಡೆದಿದೆ.
ಸ್ವಯಂ ಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮರಾಗಳು ವಾಹನದ ನಂಬರ್ ಪ್ಲೇಟ್ ಗಮನಿಸಿ ವಾಹನ ಮಾಲೀಕರು ಲಿಂಕ್ ಮಾಡಿದ ಬ್ಯಾಂಕ್ ಖಾತೆಗಳಿಂದ ನೇರವಾಗಿ ಟೋಲ್ ಶುಲ್ಕ ಕಡಿತಗೊಳಿಸುತ್ತವೆ. ಇದಿನ್ನೂ ಪ್ರಾಯೋಗಿಕ ಹಂತದಲ್ಲಿದ್ದು, ಸಂಪೂರ್ಣ ಲೋಪ ದೋಷ ಸರಿಪಡಿಸಿ ಯೋಜನೆ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನರೇಂದ್ರ ಮೋದಿ ಸರ್ಕಾರ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಲು ಮತ್ತು ಅವುಗಳ ಬದಲಿಗೆ ನಂಬರ್ ಪ್ಲೇಟ್‌ಗಳನ್ನು ಓದುವ ಕ್ಯಾಮೆರಾಗಳನ್ನು ಅಳವಡಿಸಲು ಚಿಂತನೆ ನಡೆಸುತ್ತಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಯೋಜನೆಯು ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಎಲ್ಲಾ ಟೋಲ್ ಪ್ಲಾಜಾಗಳನ್ನು ತೆಗೆದುಹಾಕುತ್ತದೆ. ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ (ANPR) ಕ್ಯಾಮೆರಾಗಳನ್ನು ಅವಲಂಬಿಸುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂದರ್ಶನದಲ್ಲಿ ತಿಳಿಸಿದ್ದಾರೆ.