ಕಾಸರಗೋಡು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ತೀವ್ರ ನಿಗಾ ಮತ್ತು ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ತಪಾಸಣೆ ಚುರುಕುಗೊಳಿಸಲಾಗುವುದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ವೈಭವ್ ಸಕ್ಸೇನಾ ತಿಳಿಸಿದ್ದಾರೆ.
ಆ.15ರಂದು ಪರೇಡ್ ನಡೆಯಲಿರುವ ಕಾಸರಗೋಡು ನಗರಸಭಾ ಸ್ಟೇಡಿಯಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಸಂಪೂರ್ಣ ಪೆÇಲೀಸ್ ನಿಯಂತ್ರಣದಲ್ಲಿರಲಿದೆ. ಕ್ರೀಡಾಂಗಣ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸಂಪೂರ್ಣವಾಗಿ ವೀಡಿಯೋಗ್ರಫಿ ಮತ್ತು ಸಿಸಿಟಿವಿ ಕಣ್ಗಾವಲು ನಡೆಸಲಾಗುವುದು. ಕ್ರೀಡಾಂಗಣದ ಪ್ರವೇಶದ್ವಾರವು ಭದ್ರತಾ ಮಾನದಂಡಗಳಿಗೆ ಒಳಪಟ್ಟಿರುವುದಾಗಿ ಸ್ವಾತಂತ್ರ್ಯ ದಿನಾಚರಣೆಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಂದಾಯ, ಆರೋಗ್ಯ, ಶಿಕ್ಷಣ, ಅಗ್ನಿಶಾಮಕ, ಅರಣ್ಯ, ಪೆÇಲೀಸ್, ಲೋಕೋಪಯೋಗಿ, ಕೆಎಸ್‍ಇಬಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
ಸ್ವಾತಂತ್ರ್ಯ ದಿನಾಚರಣೆ: ಜಿಲ್ಲೆಯಲ್ಲಿ ಬಿಗು ತಪಾಸಣೆ
0
ಆಗಸ್ಟ್ 13, 2022
Tags