ಮಂಜೇಶ್ವರ: ಬಾಕ್ರಬೈಲ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ನೆರವೇರಿತು. ಶಾಲಾ ಪಿ ಟಿ ಎ ಅಧ್ಯಕ್ಷ ಅಬ್ದುಲ್ ಮಜೀದ್ ಧ್ವಜಾರೋಹಣ ನೆರವೇರಿಸಿದರು.. ಬ್ಲಾಕ್ ಪಂಚಾಯತಿ ಸದಸ್ಯ ಮೊೈದೀನ್ ಕುಂಞ ಶುಭಹಾರೈಸಿದರು. ಮಾತೃ ಸಂಘದ ಅಧ್ಯಕ್ಷೆ ಶಶಿಕಲಾ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ವಿವಿಧ ಸದಸ್ಯರು, ರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳು ಹಾಗೂ ರಕ್ಷಕರಿಂದ ಆಕರ್ಷಕ ಮೆರವಣಿಗೆ ಜರಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ವಿಜೇತರಿಗೆ ಬಹುಮಾನ ನೀಡಲಾಯಿತು. ಮಧ್ಯಾಹ್ನ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಪಾಯಸ ವಿತರಿಸಲಾಯಿತು. ಮುಖ್ಯೋಪಾಧ್ಯಾಯ ಶ್ರೀನಿವಾಸ ರಾವ್ ಸ್ವಾಗತಿಸಿ, ವಂದಿಸಿದರು.
ಬಾಕ್ರಬೈಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
0
ಆಗಸ್ಟ್ 18, 2022
Tags