ನವದೆಹಲಿ: ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಲೆಪ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.
ಪ್ರಕರಣದಲ್ಲಿ ತಮ್ಮನ್ನು ಶಿಕ್ಷೆಗೆ ಒಳಪಡಿಸಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ಕ್ರಮವು ಕಾನೂನುಬಾಹಿರವಾದುದು ಎಂದು ಪ್ರತಿಪಾದಿಸಿ ಪುರೋಹಿತ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.