ಪಾಟ್ನ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಬುಧವಾರ ವಿಶ್ವಾಸ ಮತ ಗೆದ್ದಿದ್ದಾರೆ.
ನಿತೀಶ್ ಪರವಾಗಿ 160 ಮತಗಳು ಚಲಾವಣೆಯಾದವು.
ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡಿದ್ದ ನಿತೀಶ್ ಕುಮಾರ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಬಳಿಕ ಮಹಾಘಟಬಂಧನ ಮೈತ್ರಿಕೂಟದಲ್ಲಿ ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಸಿಎಂ ಆಗಿ ಸರ್ಕಾರ ರಚಿಸಿದ್ದರು.