ತಿರುವನಂತಪುರ: ರಾಜ್ಯದಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯಗೊಳಿಸಲಾಗಿದೆ. ಇವುಗಳನ್ನು ಆರು ತಿಂಗಳ ಕಾಲ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೊರೊನಾ ನಿಯಂತ್ರಣದ ಭಾಗವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ. ಹೊಸ ಆದೇಶವನ್ನು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿಂಕು ಬಿಸ್ವಾಲ್ ಹೊರಡಿಸಿದ್ದಾರೆ.
ಉದ್ಯೋಗದ ಸ್ಥಳಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಎಲ್ಲಾ ಸಾಮಾಜಿಕ ಸಭೆಗಳಲ್ಲಿ ಮತ್ತು ವಾಹನಗಳಲ್ಲಿ ಮಾಸ್ಕ್ ಧರಿಸಬೇಕು. ಅಂಗಡಿಗಳು, ಸಂಸ್ಥೆಗಳು ಮತ್ತು ಥಿಯೇಟರ್‍ಗಳಲ್ಲಿ ಸ್ಯಾನಿಟೈಸರ್‍ಗಳನ್ನು ಖಚಿತಪಡಿಸಿಕೊಳ್ಳಬೇಕು. ಇತರೆ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಸಂಘಟಕರು ಇವುಗಳನ್ನು ಒದಗಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನಿನ್ನೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ದಾಟಿತ್ತು. ಸದ್ಯದ ಪರಿಸ್ಥಿತಿಯಲ್ಲಿ ವೈರಸ್ ಹರಡುವ ಸಾಧ್ಯತೆ ತುಂಬಾ ಹೆಚ್ಚಾಗಿದೆ. ಆದ್ದರಿಂದ, ಜನರು ತಮ್ಮನ್ನು ತಾವು ಸುರಕ್ಷಿತವಾಗಿರಿಸಿಕೊಳ್ಳುವುದು ಅತ್ಯಗತ್ಯ ಎಂದು ಆರೋಗ್ಯ ಇಲಾಖೆ ಎಚ್ಚರಿಕೆಯ ಸೂಚನೆ ನೀಡಿದೆ.
ರಾಜ್ಯದಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಮತ್ತೆ ಕಡ್ಡಾಯಗೊಳಿಸಿದ ಸರ್ಕಾರ
0
ಆಗಸ್ಟ್ 06, 2022