ಕಾಸರಗೋಡು: ನೀಲೇಶ್ವರ ಬ್ಲಾಕ್ ಪಂಚಾಯತಿಯಲ್ಲಿ ಕ್ರಷ್ ಶಿಶುಪಾಲನಾ ಕೇಂದ್ರ ಆರಂಭಿಸಲಾಯಿತು. ಶಾಸಕ ಎಂ. ರಾಜಗೋಪಾಲನ್ ಶಿಶುಪಾಲನಾ ಕೇಂದ್ರ ಉದ್ಘಾಟಿಸಿದರು. ಸ್ತನ್ಯಪಾನವನ್ನು ಉತ್ತೇಜಿಸಲು ಮತ್ತು ಕೆಲಸದ ಸ್ಥಳಗಳಲ್ಲಿ ಆರೋಗ್ಯಕರ ಮಕ್ಕಳ ಆರೈಕೆಯನ್ನು ಒದಗಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಶಿಶುಪಾಲನಾ ಕೇಂದ್ರ ಯೋಜನೆ (ಕ್ರಶ್) ಪ್ರಾರಂಭಿಸಲಾಗುತ್ತಿದೆ. ಶಿಶುಪಾಲನಾ ಕೇಂದ್ರದ ಮೂಲಕ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಆರು ತಿಂಗಳಿಂದ ಆರು ವರ್ಷದವರೆಗಿನ ಮಕ್ಕಳ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿದೆ.
ಶಿಶುಪಾಲನಾ ಕೇಂದ್ರವು ರಾಷ್ಟ್ರೀಯ ಕ್ರμï ಯೋಜನೆಯಡಿಯಲ್ಲಿ 50 ಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಆರ್ಥಿಕ ವರ್ಷದಲ್ಲಿ ಇಡೀ ರಾಜ್ಯದಲ್ಲಿ 25 ಕ್ರμïಗಳನ್ನು ಆರಂಭಿಸಲಾಗುವುದು.
ನೀಲೇಶ್ವರ ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಮಾಧವನ್ ಮಣಿಯೇರ ಅಧ್ಯಕ್ಷತೆ ವಹಿಸಿದ್ದರು. ನೀಲೇಶ್ವರ ನಗರಸಭೆ ಅಧ್ಯಕ್ಷ ಟಿ.ವಿ. ಶಾಂತಾ ಮುಖ್ಯ ಅತಿಥಿಗಳಾಗಿದ್ದರು. ಬ್ಲಾಕ್ ಪಂಚಾಯಿತಿ ಉಪಾಧ್ಯಕ್ಷ ಪಿ.ಕೆ. ಲಕ್ಷ್ಮಿ, ಬ್ಲಾಕ್ ಪಂಚಾಯಿತಿ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ವಿ. ಸುನಿತಾ, ನಗರಸಭಾ ಸದಸ್ಯೆ ದಾಕ್ಷಾಯಣಿ ಕುಂಞÂ್ಞ ಕಣ್ಣನ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಎ. ಬಿಂದು, ಮಕ್ಕಳ ಕಲ್ಯಾಣ ಸಮಿತಿ ಕಾರ್ಯದರ್ಶಿ ಟಿ.ಎಂ. ಎ.ಕರೀಂ ಮಾತನಾಡಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿ.ಎಸ್. ಶಿಮ್ನಾ ಸ್ವಾಗತಿಸಿ, ನೀಲೇಶ್ವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ಡಿ. ಲೂಸಿ ವಂದಿಸಿದರು.