ಕಾಸರಗೋಡು: ಮುಂಗಾರು ಮಳೆಯಿಂದ ಹಾನಿಗೀಡಾದವರಿಗೆ ಪರಿಹಾರ ನೀಡಲು ಹಾಗೂ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಜಿಲ್ಲೆಯಲ್ಲಿ ಹಾಳಾದ ರಸ್ತೆಗಳ ದುರಸ್ತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಜನಪ್ರತಿನಿಧಿಗಳು ಒತ್ತಾಯಿಸಿದರು. ಭೂಕುಸಿತದಿಂದ ಮರುತೊಮ್ ಚುಳ್ಳಿಯಲ್ಲಿ ಹಾಳಾದ ರಸ್ತೆಯ ದುರಸ್ಥಿತಿಗೆ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಇಡೀ ಜಿಲ್ಲೆಯಲ್ಲಿ ಕೃಷಿ ವಲಯದಲ್ಲಿ ಭಾರಿ ಹಾನಿಯಾಗಿದೆ. ಇದನ್ನು ಪರಿಹರಿಸಿ ಮನೆ ಕಳೆದುಕೊಂಡವರಿಗೆ ಧನಸಹಾಯ ನೀಡಲು ಜನಪ್ರತಿನಿಧಿಗಳು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಕೃತಿ ವಿಕೋಪದ ಭೀತಿ ಎದುರಿಸುತ್ತಿರುವ ಕಲ್ಲಪ್ಪಳ್ಳಿ ಕಮ್ಮಡಿ ಕಾಲೋನಿಯ ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು ನಿವೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲೆಯಲ್ಲಿ ಮುಂಗಾರು ಮಳೆಗೆ ಐವರು ಸಾವನ್ನಪ್ಪಿದ್ದಾರೆ ಎಂದು ಎಡಿಎಂ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಎಲ್ಲ ನಿವೇಶನ ರಹಿತ ಹಾಗೂ ನಿವೇಶನ ರಹಿತ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ನಿವೇಶನ ದೊರಕಿಸಿಕೊಡಬೇಕು ಎಂದು ಶಾಸಕ ಇ.ಚಂದ್ರಶೇಖರನ್ ಆಗ್ರಹಿಸಿದರು. ಹೊಸದಾಗಿ 1400 ಅರ್ಜಿಗಳು ಬಂದಿವೆ ಎಂದು ಪರಪ್ಪ ಪರಿಶಿಷ್ಟ ಪಂಗಡ ಅಭಿವೃದ್ಧಿ ಅಧಿಕಾರಿ ಮಾಹಿತಿ ನೀಡಿದರು. ಭೂ ರಹಿತ ಪರಿಶಿಷ್ಟ ಪಂಗಡಗಳ ಸಮಸ್ಯೆ ಕುರಿತು ಚರ್ಚಿಸಲು ಆ.16ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಲೈಫ್ ಮಿಷನ್ ಬೆಂಡಿಚಾಲದಲ್ಲಿ ನಿರ್ಮಿಸುತ್ತಿರುವ ಫ್ಲಾಟ್ ನ ಪ್ರಗತಿ ಪರಿಶೀಲಿಸಿ ವರದಿ ನೀಡಬೇಕು ಎಂದು ಶಾಸಕ ಸಿ.ಎಚ್.ಕುಂಞಂಬು ಹೇಳಿದರು. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯುತ್ತಿರುವ ಕಾಮಗಾರಿಯಿಂದಾಗಿ ಎಲ್ಲ ಬಸ್ ತಂಗುದಾಣಗಳು ನೆಲಸಮಗೊಂಡಿರುವುದರಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆ ಪರಿಹರಿಸಲು ತಾತ್ಕಾಲಿಕವಾಗಿ ಆಶ್ರಯ ಕಲ್ಪಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾಧಿಕಾರಿ ತಿಳಿಸಿದರು. ಇರಿಯಣ್ಣಿ ಜಿವಿಎಚ್‍ಎಸ್‍ಎಸ್‍ನ ಅಂಗವಾಗಿರುವ ವಿಕಲಚೇತನ ವಿದ್ಯಾರ್ಥಿಗಳ ಐಇಡಿ ಪೂರ್ಣಗೊಂಡಿದೆ ಆದರೆ ಇನ್ನೂ ಕೆಲಸ ಪ್ರಾರಂಭವಾಗಿಲ್ಲ. ಅದಕ್ಕಾಗಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದ ನೀಲೇಶ್ವರ ಸೇತುವೆ ಕಾಮಗಾರಿಗೆ ನ್ಯಾವಿಗೇಷನ್ ಕ್ಲಿಯರೆನ್ಸ್ ದೊರೆತಿಲ್ಲ, ಹಾಗಾಗಿ ಹಳೆಯ ನೀಲೇಶ್ವರ ಸೇತುವೆ ಪುನರ್ ವಿನ್ಯಾಸ ಮತ್ತು ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಂ.ರಾಜಗೋಪಾಲನ್ ಸೂಚಿಸಿದರು. ನೀಲೇಶ್ವರ ಪಳ್ಳಿಕ್ಕೆರೆ ರೈಲ್ವೆ ಮೇಲ್ಸೇತುವೆ ಪೂರ್ಣಗೊಳಿಸಲು ರೈಲ್ವೆಯ ಅನುಮತಿ ಪಡೆಯಬೇಕು. ಎಡಮೋಟ್ ನೀಲೇಶ್ವರ ರಸ್ತೆಯ ಸ್ಥಳ ಸ್ವಾಧೀನವನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಕಾಸರಗೋಡಿಗೆ ಮಂಜೂರಾಗಿರುವ ಶಿಕ್ಷಣ ಸಂಕೀರ್ಣದ ಕಾಮಗಾರಿ ಆರಂಭಿಸಲು ವಿಳಂಬ ಮಾಡಬಾರದು ಎಂದು ಶಾಸಕ ಎನ್.ಎ.ನೆಲ್ಲಿಕುನ್ಮುನ್ ಹೇಳಿದರು. ಎರಡು ವಾರದಲ್ಲಿ ಅಂದಾಜು ಪಟ್ಟಿ ನೀಡುವುದಾಗಿ ಲೋಕೋಪಯೋಗಿ ಕಟ್ಟಡ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಣ ಭವನಕ್ಕೆ 15 ಕೋಟಿ ಮೀಸಲಿಡಲಾಗಿದೆ. ಪಿಲಿಕುಂಜೆಯಲ್ಲಿ ಅಬಕಾರಿ ಸಂಕೀರ್ಣ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸಬೇಕು ಎಂದು ಶಾಸಕರು ತಿಳಿಸಿದರು.
ಕರಂದಕ್ಕಾಡ್-ತಳಂಗೆರೆ ರೈಲು ನಿಲ್ದಾಣದವರೆಗಿನ ರಸ್ತೆ ಕಾಮಗಾರಿಯನ್ನು ಆಯ್ದ ಸ್ಥಳದಲ್ಲಿ ಅನುμÁ್ಠನಗೊಳಿಸಲು ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ವಿಶೇಷ ಅಧಿಕಾರಿ, ಕೇರಳ ಜಲ ಪ್ರಾಧಿಕಾರದ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನೊಳಗೊಂಡ ಸಭೆಯನ್ನು ಕರೆಯಲು ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ.
ಮಂಜೇಶ್ವರ ತಾಲೂಕು ಕಚೇರಿ ಸೇರಿದಂತೆ ಸಿಬ್ಬಂದಿ ಕೊರತೆ ನೀಗಿಸಬೇಕು ಎಂದು ಶಾಸಕ ಎ.ಕೆ.ಎಂ.ಅಶ್ರಫ್ ಹೇಳಿದರು. ಭಾμÁ ಅಲ್ಪಸಂಖ್ಯಾತರ ಶಾಲೆಗಳಲ್ಲಿ ಕನ್ನಡ ಬಾರದ ಶಿಕ್ಷಕರನ್ನು ನೇಮಿಸಲಾಗುತ್ತಿದೆ ಎಂಬ ವ್ಯಾಪಕ ದೂರುಗಳ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಶಾಸಕರು ತಿಳಿಸಿದರು. ಶಾಸಕರ ಪ್ರಸ್ತಾವನೆ ಮೇರೆಗೆ ಪೈವಳಿಗೆ ಹಾಗೂ ಮೀಂಜ ಗ್ರಾಮದ ಕೊಮ್ಮಂಗಳದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉಸ್ತುವಾರಿಯಲ್ಲಿ ಸ್ಥಾಪಿಸಲಾಗಿರುವ ಸೋಲಾರ್ ಪಾರ್ಕ್‍ಗೆ ಭೂಮಿ ಬಿಟ್ಟುಕೊಟ್ಟಿರುವ ಖಾಸಗೀ ವ್ಯಕ್ತಿಗಳ ದೂರಿನ ಪರಿಗಣನೆಗೆ ವಿಶೇಷ ಸಭೆ ಕರೆಯಲು ನಿರ್ಧರಿಸಲಾಯಿತು. ವ್ಯಕ್ತಿಗಳಿಗೆ ನಯಾಪೈಸೆ ಸಕ್ಕಿಲ್ಲ ಎಂದು ದೂರಲಾಗಿತ್ತು.
ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ವಹಿಸಿದ್ದರು. ಶಾಸಕರಾದ ಎಂ.ರಾಜಗೋಪಾಲನ್, ಇ.ಚಂದ್ರಶೇಖರನ್, ಸಿ.ಎಚ್.ಕುಂಞಂಬು, ಎನ್.ಎ.ನೆಲ್ಲಿಕುಂಞ, ಎ.ಕೆ.ಎಂ.ಅಶ್ರಫ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಸ್ ಪಾದೂರು, ಕಾಸರಗೋಡು ಸಂಸದರ ಪ್ರತಿನಿಧಿ ಸಾಜಿದ್ ಮವ್ವಾಲ್, ಜಿಲ್ಲಾ ಯೋಜನಾಧಿಕಾರಿ ಎ.ಎಸ್.ಮಾಯಾ, ಎಡಿಎಂ ಎ.ಕೆ.ರಾಮೇಂದ್ರನ್, ಉಪ ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ, ಅಧಿಕಾರಿ ಇ.ಪಿ.ರಾಜಮೋಹನ್, ಆರ್.ಡಿ.ಒ.ಅತುಲ್ ಸ್ವಾಮಿನಾಥ್, ಸ್ಥಳೀಯಾಡಳಿತ ಇಲಾಖೆ ಜಂಟಿ ನಿರ್ದೇಶಕ ಜೇಸನ್ ಮ್ಯಾಥ್ಯೂ, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಕೆ.ಪ್ರದೀಪನ್, ವಿವಿಧ ಇಲಾಖೆಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಿಸಿದ ತಹಸೀಲ್ದಾರರು ಉಪಸ್ಥಿತರಿದ್ದರು.
ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆ: ಮಳೆಗಾಲದಲ್ಲಿ ಹಾನಿಗೊಳಗಾದವರಿಗೆ ಪರಿಹಾರ ನೀಡಲು ತುರ್ತು ಕ್ರಮ
0
ಆಗಸ್ಟ್ 08, 2022