ತಿರುವನಂತಪುರ: ಸಿಪಿಎಂ ತಿರುವನಂತಪುರ ಜಿಲ್ಲಾ ಸಮಿತಿ ಕಚೇರಿ ಮೇಲೆ ನಡೆದ ದಾಳಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಖಂಡಿಸಿದ್ದಾರೆ.
ಪಕ್ಷದ ಕಚೇರಿಗಳು ಮತ್ತು ಕಾರ್ಯಕರ್ತರ ಮೇಲೆ ದಾಳಿ ಮಾಡುವ ಮೂಲಕ ಶಾಂತಿಯುತ ವಾತಾವರಣಕ್ಕೆ ಭಂಗ ತರುವ ಕ್ರಮಗಳ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಇಂತಹ ಪ್ರಚೋದನೆಗಳಿಗೆ ಜನರು ಒಳಗಾಗಬೇಡಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಅಪರಾಧಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಪೋಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ದಾಳಿ ನಡೆದ ಸಿಪಿಎಂ ಜಿಲ್ಲಾ ಸಮಿತಿ ಕಚೇರಿಗೂ ಪಿಣರಾಯಿ ವಿಜಯನ್ ಭೇಟಿ ನೀಡಿದ್ದರು.
ಇಂದು ಮುಂಜಾನೆ 2 ಗಂಟೆ ಸುಮಾರಿಗೆ ತಿರುವನಂತಪುರಂನಲ್ಲಿರುವ ಸಿಪಿಎಂ ಜಿಲ್ಲಾ ಸಮಿತಿ ಕಚೇರಿ ಮೇಲೆ ದಾಳಿ ನಡೆದಿದೆ. ಮೂರು ಬೈಕ್‍ಗಳಲ್ಲಿ ಬಂದ ಆರು ಮಂದಿಯ ತಂಡ ಈ ದಾಳಿ ನಡೆಸಿದೆ. ಇದರ ಸಿಸಿಟಿವಿ ದೃಶ್ಯಾವಳಿ ಪೋಲೀಸರಿಗೆ ಲಭ್ಯವಾಗಿದೆ. ಕಚೇರಿಯ ಹೊರಗಿದ್ದ ಪೆÇಲೀಸರು ಬೈಕ್ ಹಿಂಬಾಲಿಸಿದರೂ ಆರೋಪಿಯನ್ನು ಹಿಡಿಯಲು ಸಾಧ್ಯವಾಗಲಿಲ್ಲ. ದಾಳಿಯ ಹಿಂದೆ ಆರ್‍ಎಸ್‍ಎಸ್ ಕೈವಾಡವಿದೆ ಎಂದು ಸಿಪಿಎಂ ಆರೋಪಿಸಿದೆ. ವಿವರವಾದ ತನಿಖೆ ನಡೆಯುತ್ತಿದೆ.
ಶಾಂತಿಯ ವಾತಾವರಣವನ್ನು ಕದಡುವ ಯತ್ನ: ಪ್ರಚೋದನೆಗಳಲ್ಲಿ ಪಾಲ್ಗೊಳ್ಳಬೇಡಿ; ಸಿಪಿಎಂ ಕಚೇರಿ ಮೇಲಿನ ದಾಳಿಗೆ ಮುಖ್ಯಮಂತ್ರಿ ಪ್ರತಿಕ್ರಿಯೆ
0
ಆಗಸ್ಟ್ 27, 2022
Tags