ಬದಿಯಡ್ಕ: ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ನಡೆದ ಗಿಡ ನೆಡುವ ಕಾರ್ಯಕ್ರಮವನ್ನು ಉತ್ತರ ವಲಯ ಸಾಮಾಜಿಕ ಅರಣ್ಯ ಸಂರಕ್ಷಣಾಧಿಕಾರಿ ಆರ್.ಕೀರ್ತಿ ಉದ್ಘಾಟಿಸಿದರು. ಕುಂಬಳೆ-ಮುಳ್ಳೇರಿಯಾ ರಸ್ತೆ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ಕಡಿದುರುಳಿಸಿದ ಸುಮಾರು ಎರಡು ಸಾವಿರ ಮರಗಳ ಬದಲಿಗೆ ಆರ್‍ಡಿಎಸ್ ಪ್ರಾಜೆಕ್ಟ್ ಲಿಮಿಟೆಡ್ ಹಮ್ಮಿಕೊಂಡ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಕಡಿದುರುಳಿಸಿರುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಗಿಡಗಳನ್ನು ನೆಡುವ ಯೋಜನೆ ಇದಾಗಿದೆ. ಅರಣ್ಯ ಮತ್ತು ವನ್ಯಜೀವಿ ಇಲಾಖೆ ಮತ್ತು ಆರ್‍ಡಿಎಸ್ ಪ್ರಾಜೆಕ್ಟ್ ಲಿಮಿಟೆಡ್ ಈ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಅರಣ್ಯ ಇಲಾಖೆಯ ಅಧೀನದಲ್ಲಿರುವ ಬೇಳ-ಕೊಲ್ಲಂಗಾನದಲ್ಲಿರುವ ಜಿಲ್ಲಾ ಕಾಯಂ ನರ್ಸರಿ ಮತ್ತು ಅರಣ್ಯ ಭೂಮಿಯಲ್ಲಿ ಮರಗಳಾಗಿ ಬೆಳೆಯಬಲ್ಲ ಸಸಿಗಳನ್ನು ನೆಡುವ ಕಾರ್ಯ ಆರಂಭವಾಗಿದೆ. ಕೆಎಸ್‍ಟಿಪಿ ಕಣ್ಣೂರು ವಿಭಾಗ ಅಧೀನದಲ್ಲಿ ವಿವಿಧ ಜಿಲ್ಲೆಗಳಲ್ಲಿ ಕೈಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಕಡಿದುರುಳಿಒಸುವ ಮರಗಳ ಬದಲು ಸಸಿ ನೆಡುವ ಯೋಜನೆಯನ್ನು ಇದೇ ಮೊದಲ ಬಾರಿಗೆ ಕಾಸರಗೋಡಿನಲ್ಲಿ ಆರಂಭಿಸಲಾಗಿದೆ. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರ ಅಧ್ಯಕ್ಷತೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ ಶಾಂತಾ ಅಧ್ಯಕ್ಷತೆ ವಹಿಸಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಧನೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಕಾಸರಗೋಡು ವಿಭಾಗೀಯ ಅರಣ್ಯಾಧಿಕಾರಿ ಪಿ.ಬಿಜು, ಆರ್.ಡಿ.ಎಸ್ ಪ್ರಾಜೆಕ್ಟ್ ಲಿಮಿಟೆಡ್ ಟೀಮ್ ಲೀಡರ್ ಕೆ.ಜಿಜಿ, ರೇಂಜ್ ಫಾರೆಸ್ಟ್ ಆಫೀಸರ್ ಕೆ.ವಿ.ಅರುಣೇಶ್ ಉಪಸ್ಥಿತರಿದ್ದರು.
'ಆಜಾದಿ ಕಾ ಅಮೃತ ಮಹೋತ್ಸವ್': ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
0
ಆಗಸ್ಟ್ 02, 2022
Tags