ಮುಂಬೈ: ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ ಸಂಜಯ್ ರಾವುತ್ ಅವರ ವಿಚಾರಣೆಯು ಮುಂಬೈ ನ್ಯಾಯಾಲಯದಲ್ಲಿ ಸೋಮವಾರ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ) ರಾವುತ್ ಅವರನ್ನು ನ್ಯಾಯಾಲಯಕ್ಕೆ ಕರೆತಂದಿದೆ.ಭೂ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಸಂಜಯ್ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆ ನಂತರ ಅವರನ್ನು ವಶಕ್ಕೆ ಪಡೆದಿದ್ದರು.
ಇದೇ ವೇಳೆ, ರಾವುತ್ ಮನೆಗೆ ಭೇಟಿ ನೀಡಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.ಮೂಲಗಳ ಪ್ರಕಾರ, ರಾವುತ್ ನಿವಾಸದಿಂದ ₹11.50 ಲಕ್ಷ ಅಕ್ರಮ ನಗದು ಹಣವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
₹1,034 ಕೋಟಿ ಮೊತ್ತದ ಪತ್ರಾ ಚಾಲ್ ಭೂ ಹಗರಣದ ಸುಳಿಯಲ್ಲಿ ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾಗಿದೆ.