ಮಂಜೇಶ್ವರ: ಜಿಲ್ಲಾ ಸಾಮಾಜಿಕ ನ್ಯಾಯ ಕಛೇರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಮಂಜೇಶ್ವರ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಮದರ್ ತೆರೆಸಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು.
ಮಂಜೇಶ್ವರ ಸ್ನೇಹಾಲಯ ಮನೋ ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮವನ್ನು ಉಪ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಬಿ.ಕರುಣಾಕರನ್ ಉದ್ಘಾಟಿಸಿದರು. ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಶೀಬಾ ಮುಮ್ತಾಜ್ ಅಧ್ಯಕ್ಷತೆ ವಹಿಸಿದ್ದರು. ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷ ಜೋಸೆಫ್ ಕ್ರುಸ್ತಾ ಮದರ್ ತೆರೆಸಾ ಸ್ಮಾರಕ ಉಪನ್ಯಾಸ ನೀಡಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್, ಮಂಜೇಶ್ವರ ಗ್ರಾಮ ಪಂಚಾಯತಿ ಸದಸ್ಯೆ ಹಜೀರ ಮೂಸಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಿಭಾಗಾಧಿಕಾರಿ ಕೆ.ದಿನೇಶ ಮಾತನಾಡಿದರು. ಜಿಲ್ಲಾ ಸಾಮಾಜಿಕ ನ್ಯಾಯ ಕಛೇರಿಯ ಹಿರಿಯ ಅಧೀಕ್ಷಕ ಎಂ ಅಬ್ದುಲ್ಲಾ ಸ್ವಾಗತಿಸಿ, ಸ್ನೇಹಲ ವ್ಯವಸ್ಥಾಪಕಿ ವೀಣಾ ಡಿಸೋಜ ವಂದಿಸಿದರು. ಮದರ್ ತೆರೆಸಾ ಅವರ ಜನ್ಮ ದಿನಾಚರಣೆ ನಿಮಿತ್ತ ಜಿಲ್ಲೆಯ 19 ಕೇಂದ್ರಗಳಲ್ಲಿ ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಮದರ್ ತೆರೆಸಾ ದಿನಾಚರಣೆ
0
ಆಗಸ್ಟ್ 28, 2022
Tags