ಬದಿಯಡ್ಕ: ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.
ಬೆಳಗ್ಗೆ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಧ್ವಜಾರೋಹಣಗೈದರು. ಸಂಚಾಲಕ ಜಯಪ್ರಕಾಶ ಪಜಿಲ, ಕಾರ್ಯದರ್ಶಿ ರಾಜಗೋಪಾಲ ಚುಳ್ಳಿಕ್ಕಾನ, ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಜೊತೆಗಿದ್ದರು. ನಂತರ ವಿದ್ಯಾರ್ಥಿಗಳಿಂದ ದೇಶ ಭಕ್ತಿಗೆ ಪೂರಕವಾದ ಸಾಂಸ್ಕøತಿಕ ಸಂಭ್ರಮದ ಚಟುವಟಿಕೆಗಳು ಜರಗಿದವು.