ನವದೆಹಲಿ: ಪ್ರಕರಣವೊಂದರಲ್ಲಿ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆ ರದ್ದುಗೊಳಿಸುವಂತೆ ಕೋರಿ ಗುಜರಾತ್‌ನ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಹಿಂಪಡೆದಿದ್ದಾರೆ.
ಸಂಜೀವ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಕಪಿಲ್ ಸಿಬಲ್ ಅವರು ಅರ್ಜಿ ಹಿಂಪಡೆಯುತ್ತಿರುವ ವಿಚಾರವನ್ನು ನ್ಯಾಯಮೂರ್ತಿ ಎಂ.ಆರ್.ಶಾ ಹಾಗೂ ಬಿ.ವಿ.ನಾಗರತ್ನ ಅವರ ಗಮನಕ್ಕೆ ತಂದರು.
'ಶಿಕ್ಷೆಯನ್ನು ಪ್ರಶ್ನಿಸಿ ಗುಜರಾತ್ ಹೈಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಲಾಗಿದ್ದು, ಅಲ್ಲಿ ಅದರ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಅರ್ಜಿ ಹಿಂಪಡೆಯಲು ತೀರ್ಮಾನಿಸಿದ್ದೇವೆ. ಕಾನೂನಿನ ಪ್ರಕಾರ ತ್ವರಿತವಾಗಿ ಅರ್ಜಿಯ ವಿಚಾರಣೆ ಕೈಗೊಳ್ಳುವಂತೆ ಹೈಕೋರ್ಟ್‌ಗೆ ಸೂಚಿಸಬೇಕು' ಎಂದು ಸಿಬಲ್ ಪೀಠಕ್ಕೆ ಮನವಿ ಮಾಡಿದರು.
ಪೊಲೀಸ್ ವಶದಲ್ಲಿದ್ದಾಗಲೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದ ಪ್ರಕರಣದಲ್ಲಿ ಸಂಜೀವ್ ಭಟ್‌ಗೆ 2019ರ ಜೂನ್‌ನಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.