ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆಯನ್ನು ಬುಧವಾರ ಹಮ್ಮಿಕೊಳ್ಳಲಾಯಿತು.
ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲು ಆಯೋಜಿಸಿದ್ದ ಕಾರ್ಯಕ್ರಮವು ವಿವೇಕಾನಂದ ವೃತ್ತದಿಂದ ಆರಂಭವಾಗಿ ಪಯಸ್ವಿನಿ ಸಭಾಂಗಣದಲ್ಲಿ ಮುಕ್ತಾಯಗೊಂಡಿತು. ಎನ್ನೆಸ್ಸೆಸ್ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಡೀನ್ ಕಚೇರಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ರಾಷ್ಟ್ರಧ್ವಜದೊಂದಿಗೆ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಉಪಕುಲಪತಿ ಪೆÇ್ರ.ಎಚ್.ವೆಂಕಟೇಶ್ವರಲು ಧ್ವಜಾರೋಹಣ ನೆರವೇರಿಸಿದರು. ಕುಲಸಚಿವ ಡಾ.ಎಂ.ಮುರಳೀಧರನ್ ನಂಬಿಯಾರ್, ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪೆÇ್ರ.ಕೆ.ಅರುಣ್ ಕುಮಾರ್, ಎನ್ನೆಸ್ಸೆಸ್ ಸಂಯೋಜಕ ಡಾ.ರಂಜಿತ್ ಕುಮಾವತ್, ಕಾರ್ಯಕ್ರಮಾಧಿಕಾರಿ ಡಾ.ಎಸ್.ಅನ್ಬಳಕಿ, ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು, ಡೀನ್ ಗಳು, ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.
ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸ್ವಾತಂತ್ರ್ಯ ನಡಿಗೆ
0
ಆಗಸ್ಟ್ 12, 2022
Tags