ನವದೆಹಲಿ: ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಭಾನುವಾರ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು, ಸೆಪ್ಟೆಂಬರ್ 20ರ ವೇಳೆಗೆ ಇದು ಪೂರ್ಣಗೊಳ್ಳಲಿದೆ ಎಂದು ಪಕ್ಷದ ಕೇಂದ್ರೀಯ ಚುನಾವಣಾ ಪ್ರಾಧಿಕಾರ ತಿಳಿಸಿದೆ.
'ಆಗಸ್ಟ್ 21 ರಿಂದ ಸೆಪ್ಟೆಂಬರ್ 20ರ ನಡುವೆ ಯಾವ ದಿನ ಚುನಾವಣೆ ನಡೆಸಬೇಕು ಎಂಬುದನ್ನು ಕಾಂಗ್ರೆಸ್ ಕಾರ್ಯಕಾರಿ ಮಂಡಳಿ (ಸಿಡಬ್ಲ್ಯುಸಿ) ನಿರ್ಧರಿಸಲಿದೆ' ಎಂದು ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದ್ದಾರೆ.