ಮಂಜೇಶ್ವರ: ಕಳಿಯೂರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಯುದ್ಧವಿರೋಧಿ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಯುದ್ಧವಿರೋಧಿ ಘೋಷಣಾ ವಾಕ್ಯಗಳ ಫಲಕಗಳೊಂದಿಗೆ ಪಥಸಂಚಲನ ನಡೆಸಿದರು.
ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸೀತಾರಾಮ್ ಬೇರಿಂಜ , ಶಾಲಾ ಮುಖ್ಯೋಪಾಧ್ಯಾಯಿನಿ ಪುμÁ್ಪವತಿ, ಪಿಟಿಎ ಮಾಜಿ ಅಧ್ಯಕ್ಷ ಸುಧಾಕರ್ ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.