ಕಾಸರಗೋಡು: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಲ್ಲಿ ಸರ್ಕಾರಿ ಉದ್ಯೋಗಾವಕಾಶಗಳು, ಉನ್ನತ ಶಿಕ್ಷಣ ಸಂಬಂಧಿತ ಮಾಹಿತಿ ಮತ್ತು ವಿವಿಧ ಅಭಿವೃದ್ಧಿ ಕಲ್ಯಾಣ ಚಟುವಟಿಕೆಗಳನ್ನು ಕನ್ನಡದಲ್ಲಿ ಒದಗಿಸಲು ವಿಶೇಷ ವ್ಯವಸ್ಥೆ ನಡೆಸಲಾಗುವುದು.
ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಊರು ಮುಪ್ಪನ್ಮಾರ್ ಜಿಲ್ಲಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಅಧಿಕಾರಿ, ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ, ಬ್ಲಾಕ್ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇಲಾಖೆ ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಚಾರಕರು ಮುಂತಾದವರ ಸಭೆ ಆಯೋಜಿಸಲು ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಮಾಹಿತಿ ನೀಡಲು ಕನ್ನಡ ಭಾಷಾಂತರಕಾರರು ಮತ್ತು ಕನ್ನಡ ಬಲ್ಲ ಪ್ರವರ್ತಕರೊಂದಿಗೆ ಸಮಿತಿಯನ್ನು ರಚಿಸಲಾಗುವುದು.
ಕೇಂದ್ರ ಸರ್ಕಾರದ ಪಿ.ಎಂ.ಅಜಯ್ ಯೋಜನೆಯ ವಿಶೇಷ ಮಾರ್ಗಸೂಚಿಯಂತೆ ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಸಂಚಾಲಕರಾಗಿ ಜಿಲ್ಲಾ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್‍ಚಂದ್, ಜಿಲ್ಲಾ ಯೋಜನೆಅಧಿಕಾರಿ ಎ.ಎಸ್. ಮಾಯ ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಎಸ್. ಮೀನಾ ರಾಣಿ, ಕಾಸರಗೋಡು ಪರಿಶಿಷ್ಟ ಪಂಗಡ ಅಭಿವೃದ್ಧಿ ಅಧಿಕಾರಿ ಎಂ. ಮಲ್ಲಿಕಾ, ಜಿಲ್ಲಾ ಮಾಹಿತಿ ಅಧಿಕಾರಿ ಎಂ. ಮಧುಸೂದನನ್ ಹಾಗೂ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.