HEALTH TIPS

ನೇಮಕಾತಿ ಪರೀಕ್ಷೆ ವೇಳೆ ಅಂತರ್ಜಾಲ ಸ್ಥಗಿತ: ಆಕ್ರೋಶ

 

     ಗುವಾಹಟಿ: ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಅಸ್ಸಾಂ ಸರ್ಕಾರವು ಭಾನುವಾರ ಎಂಟು ಗಂಟೆಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮೊಬೈಲ್ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಿತ್ತು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

                ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಗ್ರೇಡ್‌-3, ಗ್ರೇಡ್‌-4 ಸಿಬ್ಬಂದಿ ನೇಮಕಾತಿಗಾಗಿ ಭಾನುವಾರ ಪ್ರವೇಶ ಪರೀಕ್ಷೆ ನಡೆಸಿತ್ತು. ಸುಮಾರು 14 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮೊಬೈಲ್ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಸಂಜೆ 5.30ರ ವೇಳೆಗೆ ಅಂತರ್ಜಾಲ ಸೇವೆಯನ್ನು ಒದಗಿಸಲಾಯಿತು.

              ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ರಾಜ್ಯ ಪೊಲೀಸ್ ಇಲಾಖೆಯು ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ಜಾರಿಗೊಳಿಸಿತ್ತು. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಒಯ್ಯುವುದನ್ನು (ಸ್ವಿಚ್ ಆಫ್ ಆಗಿದ್ದರು ಕೂಡಾ) ನಿಷೇಧಿಸಲಾಗಿತ್ತು.

                'ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ ಸಾರ್ವಜನಿಕರಿಗೆ ತೊಂದರೆಯುಂಟಾಯಿತು. 'ಅಂತರ್ಜಾಲ ಸೇವೆ ಸ್ಥಗಿತದಿಂದಾಗಿ ಪರೀಕ್ಷೆಯ ಅಧ್ಯಯನಕ್ಕೆ ನನಗೆ ಬಹಳಷ್ಟು ತೊಂದರೆಯಾಯಿತು. ಇದು ಉತ್ತಮ ಸರ್ಕಾರದ ಲಕ್ಷಣವಲ್ಲ' ಎಂದು ನಾಗರಿಕ ಸೇವಾ ಪರೀಕ್ಷೆಯ ಅಭ್ಯರ್ಥಿ ಸುಜಾತ ಗೌತಮ್ ಎಂಬುವರು ಫೇಸ್‌ಬುಕ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

                'ಅಂತರ್ಜಾಲ ಸೇವೆ ಸ್ಥಗಿತಗೊಳಿಸಿದ್ದು ನೇಮಕಾತಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಸುರಕ್ಷಿತ ಕ್ರಮವಾಗಿದೆ' ಎಂದು ಸರ್ಕಾರವು ಪ್ರತಿಪಾದಿಸಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ವಿಫಲವಾಗಿದೆ ಎಂದು ವಿರೋಧಪಕ್ಷಗಳು ಆರೋಪಿಸಿವೆ.

               ಈ ಸಂಬಂಧ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಲೋಕಸಭಾ ಸದಸ್ಯ ಪರ್ದ್ಯುತ್ ಬೊರ್ಡೊಲೊಯ್, '1985ರ ಟೆಲಿಗ್ರಾಂ ನಿಯಮ ಮತ್ತು 2017ರ ತಾತ್ಕಾಲಿಕ ಟೆಲಿಗ್ರಾಂ ಸೇವೆ ಸ್ಥಗಿತಗೊಳಿಸುವ ಸರ್ವೀಸ್ ನಿಯಮಗಳ ಪ್ರಕಾರ ಸಾರ್ವಜನಿಕ ತುರ್ತು ಪರಿಸ್ಥಿತಿ ಅಥವಾ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಸಂದರ್ಭದಲ್ಲಿ ಮಾತ್ರ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ' ಎಂದಿದ್ದಾರೆ.

               ಅಸ್ಸಾಂ ಸರ್ಕಾರವು ಆಗಸ್ಟ್ 28 ಮತ್ತು ಸೆಪ್ಟೆಂಬರ್ 11ರಂದು ಇದೇ ಮಾದರಿಯಲ್ಲಿ ನೇಮಕಾತಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries