ಕಾಸರಗೋಡು: ಕವಿ ಕಯ್ಯಾರ ಕಿಞ್ಞಣ್ಣ ರೈ ಸ್ಮಾರಕ ಸಾಂಸ್ಕೃತಿಕ ಕೇಂದ್ರ ನಿರ್ಮಾಣಕಾರ್ಯದ ಬಗ್ಗೆ ಸಮಾಲೋಚನಾ ಸಭೆ ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚೇಂಬರ್‍ನಲ್ಲಿ ಜರುಗಿತು. ನಾಡೋಜ, ಕನ್ನಡದ ಕಟ್ಟಾಳು ಡಾ. ಕಯ್ಯಾರ ಕಿಞಣ್ಣ ರೈ ಅವರ ಹೆಸರಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ಡಾ. ಕಯ್ಯಾರ ಕುಟುಂಬಸ್ಥರು ಪೆರಡಾಲ ಕವಿತಾ ಕುಟೀರ ಸನಿಹ ಉದಾರವಾಗಿ ನೀಡಿರುವ ಜಾಗದಲ್ಲೇ ಸ್ಮಾರಕ ನಿರ್ಮಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸ್ಮಾರಕ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ಮೀಸಲಿರಿಸಿದ್ದು, ಕೇರಳ ಸರ್ಕಾರ ಬಜೆಟ್‍ನಲ್ಲಿ ಮೀಸಲಿರಿಸಿರುವ 50ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಸ್ಮಾರಕ ನಿರ್ಮಣಗೊಳ್ಳಲಿದೆ. ಸ್ಮಾರಕ ನಿರ್ಮಾಣಕ್ಕೂ ಮೊದಲು ಜಿಲ್ಲಾ ಪಂಚಾಯಿತಿ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಲಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಜಿಲ್ಲಾಧಿಕಾರಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕವಿತಾ ಕುಟೀರ ಟ್ರಸ್ಟ್‍ನ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ನಿರ್ಮಾಣ ಕಾಮಗಾರಿಯ ಮೇಲ್ನೋಟ ವಹಿಸಲು ತೀರ್ಮಾನಿಸಲಾಯಿತು. ಜಿಲ್ಲಾ ಪಂಚಾಯಿತಿಯ ನಿರ್ಮಾಣ ಮೇಲ್ವಿಚಾರಣಾ ಸಮಿತಿಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿ ಪ್ರತಿನಿಧಿಗಳು ಮತ್ತು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳೂ ಇರಲಿದ್ದಾರೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಐ.ಎ.ಎಸ್, ಕವಿತಾ ಕುಟೀರ ಕಾರ್ಯದರ್ಶಿ ಡಾ.ಪ್ರಸನ್ನ ರೈ.ಕೆ, ಜಿಲ್ಲಾ ಪಂಚಾಯಿತಿ ಸದಸ್ಯೆ ಎಂ.ಶೈಲಜಾ ಭಟ್, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಕೆ.ಪ್ರದೀಪನ್, ಜಿಲ್ಲಾ ವಾರ್ತಾ ಮತ್ತು ಮಾಹಿತಿ ಅಧಿಕಾರಿ ಎಂ.ಮಧುಸೂದನನ್, ವಕೀಲ ಪ್ರಕಾಶ್ ಅಮ್ಮಣ್ಣಾಯ, ಪೆÇ್ರ.ಎ.ಶ್ರೀನಾಥ್, ಕೆ.ಬಾಲಕೃಷ್ಣನ್, ವೀರೇಂದ್ರ ಪ್ರಸಾದ್, ಪ್ರಕಾಶ್ ವತ್ತಿಹಳ್ಳಿ, ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಬಿ.ಎನ್.ಸುರೇಶ್, ಕವಿತಾ ಕುಟೀರದ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ, ಕುಳೂರು ಕನ್ಯಾನ, ಉಪಾಧ್ಯಕ್ಷ ಡಾ.ಮೋಹನ ಆಳ್ವ ಮೂಡುಬಿದರೆ ಅವರ ಪ್ರತಿನಿಧಿ ಭುವನಪ್ರಸಾದ ಹೆಗ್ಡೆ, ಎಂ.ಜೆ.ತಂಚ್ಚಚ್ಚನ್ ಮತ್ತಿತರರು ಭಾಗವಹಿಸಿದ್ದರು.
ಒಂದುವರೆ ಕೋಟಿ ರೂ. ವೆಚ್ಚದಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಸ್ಮಾರಕ: ಜಿಲ್ಲಾಡಳಿತ ಅಸ್ತು: ಕವಿತಾ ಕುಟೀರ ಸನಿಹ ತಲೆಯೆತ್ತಲಿದೆ ಭವ್ಯ ಸಾಂಸ್ಕøತಿಕ ಕೇಂದ್ರ
0
ಆಗಸ್ಟ್ 13, 2022
Tags