ಬದಿಯಡ್ಕ: ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ನಾವು ಪಾಲಿಸಬೇಕು ಎಂದು ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಾಂತಾ ಬಿ. ಅವರು ನುಡಿದರು.
ಪೆರಡಾಲ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಮಾತನಾಡುತ್ತಿದ್ದರು.
ಶಾಲಾ ಮುಖ್ಯೋಪಾಧ್ಯಾಯ ರಾಜಗೋಪಾಲ ಅವರು ಧ್ವಜಾರೋಹಣ ನೆರವೇರಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಮ್ಮದ್ ಕರೋಡಿ, ಉಪಾಧ್ಯಕ್ಷ ರಾಮ, ಮಾತೃ ಮಂಡಳಿಯ ಮೇರಿ ಸಿಜೋ ಸದಸ್ಯರಾದ ಶರೀಫ್,ನೌಫಲ್, ಅಬ್ಬಾಸ್, ಮೊಹಮ್ಮದ್, ಸುಂದರ ಮೊದಲಾದವರು ಉಪಸ್ಥಿತರಿದ್ದರು. ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ, ಛದ್ಮವೇಷ, ಕವಾಯತು, ವರ್ಣರಂಜಿತ ಮೆರವಣಿಗೆ ಜರುಗಿತು. ಶ್ರೀಧರನ್ ಸ್ವಾಗತಿಸಿ, ಗೋಪಾಲಕೃಷ್ಣ ಭಟ್ ವಂದಿಸಿದರು.