ಮುಂಬೈ: ಮಹಾರಾಷ್ಟ್ರದ ವಿವಿಧೆಡೆ ಕಳೆದ ಹತ್ತು ದಿನಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಅವಘಡಗಳಲ್ಲಿ 20 ಮಂದಿ ಮೃತಪಟ್ಟಿದ್ದಾರೆ, ಇವರಲ್ಲಿ 14 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ರಸ್ತೆ ಅಪಘಾತ ಸೇರಿದಂತೆ ಇತರ ಅವಘಡಗಳಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದೂ ಹೇಳಿದ್ದಾರೆ.