ಲಖನೌ: ಕಾಶಿ ವಿಶ್ವನಾಥ- ಜ್ಞಾನವಾಪಿ ಮಸೀದಿ ಆವರಣದಲ್ಲಿ ಇದೆ ಎಂದು ಹೇಳಲಾದ ಶೃಂಗಾರ ಗೌರಿ ದೇವಾಲಯದಲ್ಲಿ ಪ್ರತಿದಿನ ಪೂಜೆ ಸಲ್ಲಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನು ವಾರಾಣಸಿ ಜಿಲ್ಲಾ ನ್ಯಾಯಾಲಯವು ಸೋಮವಾರ ಪ್ರಕಟಿಸಿವ ನಿರೀಕ್ಷೆ ಇದೆ.
ಮಸೀದಿಯ ಹೊರ ಗೋಡೆಯೊಂದರ ಬಳಿ ಹಿಂದೂ ದೇವತೆಗಳ ವಿಗ್ರಹಗಳಿವೆ. ಅವುಗಳಿಗೆ ದಿನನಿತ್ಯವೂ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ಹಿಂದೂ ಧರ್ಮಕ್ಕೆ ಸೇರಿದ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ್ ಅವರು ಈ ಪ್ರಕರಣದ ತೀರ್ಪನ್ನು ಸೆಪ್ಟೆಂಬರ್ 12ರ ವರೆಗೆ ಕಾಯ್ದಿರಿಸಿ ಆಗಸ್ಟ್ 24ರಂದು ತೀರ್ಪು ನೀಡಿದ್ದರು.
ಇದಕ್ಕೂ ಮೊದಲು, ಮಸೀದಿಯ ಆವರಣದಲ್ಲಿ ವಿಡಿಯೊಗ್ರಫಿ ಸಮೀಕ್ಷೆ ನಡೆಸಲು ಕೋರ್ಟ್ ಆದೇಶಿಸಿತ್ತು. ಸಮೀಕ್ಷೆಯ ವರದಿಯನ್ನು ಈಗಾಗಲೇ ಕೋರ್ಟ್‌ಗೆ ನೀಡಲಾಗಿದೆ.