ಕಾಸರಗೋಡು: ಆರರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಂಗ್ರಮಂಜೇಶ್ವರ ಕಜೆ ರಸ್ತೆ ನಿವಾಸಿ ಮಹಮ್ಮದ್ ಅಶ್ರಫ್ ಅಲಿಯಾಸ್ ಅಬು(45)ಎಂಬಾತನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶರು 24ವರ್ಷಗಳ ಕಠಿಣ ಜೈಲು ಶೀಕ್ಷೆ ಮತ್ತು ಎರಡು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಆರೋಪಿ ಎರಡು ವರ್ಷಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
2016 ಏಪ್ರಿಲ್ ತಿಂಗಳಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನನ್ವಯ ಮಹಮ್ಮದ್ ಅಶ್ರಫ್ ವಿರುದ್ಧ ಪೋಕ್ಸೋ ಅನ್ವಯ ಮಂಜೇಶ್ವರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಕುಂಬಳೆ ಠಾಣೆಯ ಅಂದಿನ ಸಿ. ಐ ವಿ.ವಿ ಮನೋಜ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರೋಸಿಕ್ಯೂಶನ್ ಪರವಾಗಿ ವಕೀಲ ಪ್ರಕಾಶ್ ಅಮ್ಮಣ್ಣಾಯ ನ್ಯಾಯಾಲಯದಲ್ಲಿ ಹಾಜರಾಗಿದ್ದರು.
ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 24ವರ್ಷಗಳ ಕಠಿಣ ಜೈಲು ಶಿಕ್ಷೆ, 2ಲಕ್ಷ ರೂ. ದಂಡ
0
ಸೆಪ್ಟೆಂಬರ್ 30, 2022
Tags