HEALTH TIPS

ಆಕ್ಷೇಪಾರ್ಹ ವಿಡಿಯೊ ವೈರಲ್ ವದಂತಿ: ಸೆ.24ರ ವರೆಗೆ ರಜೆ ಘೋಷಿಸಿದ ಚಂಡೀಗಡ ವಿವಿ

Top Post Ad

Click to join Samarasasudhi Official Whatsapp Group

Qries

 

               ಚಂಡೀಗಡ: ಹಾಸ್ಟೆಲ್‌ನಲ್ಲಿ ಹಲವು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರೀಕರಿಸಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಮೊಹಾಲಿಯ ಚಂಡೀಗಡ ವಿಶ್ವವಿದ್ಯಾಲಯವೊಂದರಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು ಸೆಪ್ಟೆಂಬರ್‌ 24ರ ವರೆಗೆ ರಜೆ ಘೋಷಿಸಿದೆ.

                     ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

                     ಹಾಸ್ಟೆಲ್‌ನಲ್ಲಿ 4,000ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದಾರೆ. ವಿವಿಯಲ್ಲಿ ಪ್ರತಿಭಟನೆಗಳು ನಡೆದ ಬೆನ್ನಲ್ಲೇ ಹಲವರು ಮನೆಗಳಿಗೆ ತೆರಳಿದ್ದಾರೆ.

                               'ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರೀಕರಿಸಲಾಗಿದೆ ಎಂಬುದು ವದಂತಿ'
                  ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬರು ಇತರರ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರೀಕರಿಸಿ ತನ್ನ ಗೆಳೆಯರಿಗೆ ಕಳುಹಿಸಿದ್ದರು ಎಂಬುದು ವದಂತಿ. ಒಬ್ಬ ವಿದ್ಯಾರ್ಥಿನಿಯು ತನ್ನ ವಿಡಿಯೊವನ್ನು ಯುವಕನೊಬ್ಬನ ಜೊತೆ ಹಂಚಿಕೊಂಡಂತೆ ಕಾಣಿಸುತ್ತಿದೆ. ಇತರ ಯಾವುದೇ ವಿದ್ಯಾರ್ಥಿನಿಯ ಆಕ್ಷೇಪಾರ್ಹವಾದ ವಿಡಿಯೊ ಸಿಕ್ಕಿಲ್ಲ ಎಂದು ಪಂಜಾಬ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ ಗುರ್‌ಪ್ರೀತ್‌ ಕೌರ್‌ ಹೇಳಿದ್ದಾರೆ.

                 ಹಾಸ್ಟೆಲ್‌ನಲ್ಲಿ ಏನು ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಆರೋಪಿ ವಿದ್ಯಾರ್ಥಿನಿಯು ಹಾಸ್ಟೆಲ್‌ನ ಶೌಚಾಲಯದಲ್ಲಿ ಮೊಬೈಲ್‌ ಬಳಸಿ ಫೋಟೊ ತೆಗೆಯುವುದನ್ನು ಮೂರ್ನಾಲ್ಕು ವಿದ್ಯಾರ್ಥಿನಿಯರು ಗಮನಿಸಿದ್ದಾರೆ. ಆರೋಪಿಯು ಶೌಚಾಲಯದ ಬಾಗಿಲಿನ ಕೆಳಗಿನಿಂದ ವಿಡಿಯೊ ಚಿತ್ರೀಕರಿಸಿದ್ದಾರೆ ಎಂದು ಈ ಮೂರ್ನಾಲ್ಕು ವಿದ್ಯಾರ್ಥಿನಿಯರು ಭಾವಿಸಿದ್ದಾರೆ. ಬಳಿಕ, ಅವರು ಹಾಸ್ಟೆಲ್‌ ವಾರ್ಡನ್‌ಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಗುರ್‌ಪ್ರೀತ್‌ ತಿಳಿಸಿದ್ದಾರೆ.

                  'ವಿದ್ಯಾರ್ಥಿನಿಯರ ಕಳವಳವನ್ನು ಪರಿಹರಿಸಲಾಗಿದೆ. ಇತರ ವಿದ್ಯಾರ್ಥಿನಿಯರ ವಿಡಿಯೊಗಳು ಆರೋಪಿಯ ಮೊಬೈಲ್‌ನಲ್ಲಿ ಇವೆಯೇ ಎಂಬುದು ಅವರ ಕಳವಳವಾಗಿತ್ತು. ಆದರೆ, ಬೇರೆ ವಿದ್ಯಾರ್ಥಿನಿಯರ ವಿಡಿಯೊ ಆರೋಪಿಯ ಮೊಬೈಲ್‌ನಲ್ಲಿ ಸಿಕ್ಕಿಲ್ಲ' ಎಂದೂ ಮಾಹಿತಿ ನೀಡಿದ್ದಾರೆ.

                  ಹಾಸ್ಟೆಲ್‌ನಲ್ಲಿ ಇರುವ ಹಲವು ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿದೆ ಎಂಬುದು ಸುಳ್ಳು ಮತ್ತು ಆಧಾರರಹಿತ. ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದೂ ಸುಳ್ಳು ಎಂದು ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.


 

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries