ರಿಷಬ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಚಿತ್ರ, ಕಾಂತಾರ, ಸೆಪ್ಟೆಂಬರ್ 30 ರಂದು ತೆರೆಗೆ ಬರಲಿದೆ. ಕಿರಿಕ್ ಪಾರ್ಟಿ ಮತ್ತು ಸರ್ಕಾರಿ ಹಿರಿಯ ಪ್ರಾಥಿಮಿಕ ಪಾಠಶಾಲೆ ಸಿನಿಮಾಗಳಿಂದ ಹೆಸರುವಾಸಿಯಾದ ರಿಷಬ್ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಕಾಂತಾರ ಸಿನಿಮಾ ಕರ್ನಾಟಕದಾದ್ಯಂತ ಸುಮಾರು 250 ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಯುಎಸ್, ಯುಕೆ, ಯುರೋಪ್, ಮಧ್ಯಪ್ರಾಚ್ಯ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಹಲವು ಕಡೆ ಏಕಕಾಲದಲ್ಲಿ ರಿಲೀಸ್ ಆಗಲಿದೆ. ಕಾಂತಾರ ಸಿನಿಮಾ ಕೊಚ್ಚಿ, ಕಾಸರಗೋಡು, ಹೈದರಾಬಾದ್ ಮತ್ತು ಚೆನ್ನೈನಲ್ಲಿ ಪ್ರೀಮಿಯರ್ ಶೋಗಳನ್ನು ನಡೆಸಲಿದೆ.
ರಿಷಬ್ ಶೆಟ್ಟಿ ನಿರ್ದೇಶನದ ಯು/ಎ ಸರ್ಟಿಫಿಕೇಟ್ ಪಡೆದಿದೆ. ಮನುಷ್ಯ ಮತ್ತು ಪ್ರಕೃತಿ ಸಂಘರ್ಷದ ಕುರಿತ ಕಥೆ ಇದಾಗಿದೆ.
ಅಜನೀಶ್ ಬಿ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣವಿದೆ. ಕಾಂತಾರ ಸಿನಿಮಾದಲ್ಲಿ ಸಪ್ತಮಿ ಗೌಡ, ಕಿಶೋರ್ ಮತ್ತು ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.