ಉಪ್ಪಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕಾಸರಗೋಡು ಹಾಗೂ ಬೋಳಂಗಳ ಕೆರೆ ಅಭಿವೃದದಿ ಸಮಿತಿ ಪೈವಳಿಕೆ ಮತ್ತು ಪೈವಳಿಕೆ ಗ್ರಾಮ ಪಂಚಾಯತಿ ಇದರ ಸಹಯೋಗದೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಆರ್ಥಿಕ ಸಹಾಯದೊಂದಿಗೆ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ರೂಪಿಸಲಾದ ಹೂಳೆತ್ತಿ ಪುನಶ್ಚೇತನಗೊಳಿಸಲಾದ 318ನೇ ಬೋಳಂಗಳ ಕೆರೆ ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ಪೈವಳಿಕೆ ಬೋಳಂಗಳದಲ್ಲಿ ನಡೆಯಿತು.
ಪೈವಳಿಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಂತಿ ಕೆರೆ ನಾಮಫಲಕ ಅನಾವರಣಗೊಳಿಸಿದರು. ಉಪಾಧ್ಯಕ್ಷೆ ಪುಷ್ಪಲಕ್ಷ್ಮಿ ಕೆರೆಗೆ ಬಾಗಿನ ಅರ್ಪಿಸಿದರು. ಕೆರೆ ಹಸ್ತಾಂತರ ಕಾರ್ಯಕ್ರಮದ ಪೂರ್ವದಲ್ಲಿ ಗಂಗಾ ಪೂಜೆಯನ್ನು ನೆರವೇರಿಸಲಾಯಿತು.
ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್ಬಾಗ್ ಅಧ್ಯಕ್ಷತೆ ವಹಿಸಿದ್ದರು. ಜನಪ್ರತಿನಿದಿನಗಳಾದ ಅಬ್ದುಲ್ ರಝಾಕ್ ಚಿಪ್ಪಾರ್, ಝಡ್.ಎ. ಕಯ್ಯಾರ್, ಜಿಲ್ಲಾ ಪಂಚಾಯತಿ ಸದಸ್ಯೆ ಕಮಲಾಕ್ಷಿ, ಪಂಚಾಯತಿ ಸದಸ್ಯೆ ಸುನಿತಾ ವಲ್ಟಿ ಡಿ ಸೋಜ, ಶ್ರೀರಾಮ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಮೋನಪ್ಪ ಶೆಟ್ಟಿ ಕಟ್ನಬೆಟ್ಟು, ಸುಧಾಕರ ಶೆಟ್ಟಿ ಕಳಾಯಿ ಮೊದಲಾದವರು ಉಪಸ್ಥಿತರಿದ್ದರು. ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಮುಖೇಶ್ ಸ್ವಾಗತಿಸಿ, ಕೃಷಿ ಮೇಲ್ವಿಚಾರಕಿ ನಂದಿತಾ ವಂದಿಸಿದರು. ವಲಯ ಮೇಲ್ವಿಚಾರಕಿ ಯಶೋಧ ನಿರೂಪಿಸಿದರು. ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟ ಅಧ್ಯಕ್ಷರು, ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು ಭಾಗವಹಿಸಿದ್ದರು.