ಅಮರಾವತಿ: 5.47 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ಆಂಧ್ರಪ್ರದೇಶದ ಪೊಲೀಸರು ನಾಶಪಡಿಸಿದ್ದಾರೆ. ಎನ್‍ಟಿಆರ್ ಜಿಲ್ಲೆಯ ನಂದಿಗಾಮದಲ್ಲಿ ಸಂಗ್ರಹಿಸಿಟ್ಟ ಮದ್ಯದ ಬಾಟಲ್ಗಳನ್ನು ರೋಡ್ ರೋಲರ್ ಸಹಾಯದಿಂದ ನಾಶಪಡಿಸಲಾಗಿದೆ.
ಸುಮಾರು 3 ಲಕ್ಷ ಮದ್ಯದ ಬಾಟ್ಲಿಗಳು ರೋಡ್ರೋಲರ್ನಿಂದಾಗಿ ಪುಡಿಪುಡಿಯಾಗಿದ್ದು, ಅದರಲ್ಲಿರೋ ಮದ್ಯ ರಸ್ತೆಯ ಮೇಲೆಲ್ಲಾ ಹರಿದಿದೆ.ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯ ನಡೆಸಲಾಗಿದ್ದು, ವಿಡಿಯೋ ವೈರಲ್ ಆಗಿದೆ.
ತೆಲಂಗಾಣದಿಂದ ಆಂಧ್ರಪ್ರದೇಶಕ್ಕೆ ಅಕ್ರಮವಾಗಿ ಈ ಮದ್ಯದ ಬಾಟಲ್ಗಳನ್ನು ಸಾಗಿಸಲಾಗುತ್ತಿತ್ತು. ನಗರದ ಹೊರವಲಯದಲ್ಲಿರುವ ಎಲ್ಲಾ ಚೆಕ್ ಪೋಸ್ಟ್ಗಳ ಮೇಲೆ ಏಕಾಏಕಿ ದಾಳಿ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇತರ ರಾಜ್ಯಗಳಿಂದ ಆಂಧ್ರಪ್ರದೇಶಕ್ಕೆ ಅಕ್ರಮ ಮದ್ಯ ಸಾಗಣೆಯಾಗಿರುವ ಕುರಿತು ವರದಿಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ವಿಷಯ ಪೊಲೀಸರಿಗೆ ತಿಳಿಯುತ್ತಲೇ ದಾಳಿ ಮಾಡಿದ ತಂಡ 2 ಸಾವಿರ ಲೀಟರ್ ಅಕ್ರಮ ಮದ್ಯವನ್ನು ನಾಶಪಡಿಸಿದ್ದಾರೆ.
ಅಕ್ರಮ ಮದ್ಯ ಸಾಗಾಟಕ್ಕೆ ಸಂಬಂಧಿಸಿದಂತೆ 226 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ವಿಜಯವಾಡದ ಪೊಲೀಸ್ ಆಯುಕ್ತ ಕಾಂತಿ ರಾಣಾ ಟಾಟಾ ವಿವರಿಸಿದ್ದಾರೆ.
ಇಲ್ಲಿದೆ ನೋಡಿ ವಿಡಿಯೋ: ಕೃಪೆ ಎಎನ್ಐ