ಕಾಸರಗೋಡು: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜನಪ್ರತಿನಿಧಿಗಳು ಸೇರಿದಂತೆ ಜನರ ಸಹಭಾಗಿತ್ವದಲ್ಲಿ ಅಕ್ಟೋಬರ್ 3 ರಂದು ವಿಶೇಷ ಸಭೆ ನಡೆಸಲಾಗುತ್ತಿದೆ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮೇಲ್ವಿಚಾರಣಾ ಸಮಿತಿಯ ಎರಡನೇ ತ್ರೈಮಾಸಿಕ ಸಭೆಯಲ್ಲಿ ಸಂಸದ ರಾಜಮೋಹನ್ ಉಣ್ಣಿತ್ತಾನ್ ಕಸದ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಸಂಸದರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಸಿಆರ್‍ಝಡ್ ಕಾಯ್ದೆಯಿಂದಾಗಿ ಕರಾವಳಿ ವಲಯಕ್ಕೆ ಹೊಂದಿಕೊಂಡಿರುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ನಡೆಯದ ಪರಿಸ್ಥಿತಿ ಇದೆ. ಕೇಂದ್ರ ಸಚಿವಾಲಯದಲ್ಲಿ ಮಧ್ಯಪ್ರವೇಶಿಸಿ ಇದಕ್ಕೆ ಪರಿಹಾರ ಕಂಡುಕೊಳ್ಳುವುದಾಗಿ ಸಂಸದರು ತಿಳಿಸಿದರು. ಯೋಜನೆಗಳ ಅನುμÁ್ಠನದಲ್ಲಿನ ತೊಂದರೆಗಳನ್ನು ಸಕಾಲಿಕವಾಗಿ ವರದಿ ಮಾಡಬೇಕು. ಎಲ್ಲ ಲೋಪದೋಷಗಳನ್ನು ನಿವಾರಿಸಿ ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಶ್ರಮಿಸಬೇಕು ಎಂದ ಸಂಸದರು, ಕೇಂದ್ರ ಹಾಗೂ ರಾಜ್ಯ ಸÀರ್ಕಾರಗಳಿಗೆ ಸಕಾಲದಲ್ಲಿ ಮಾಹಿತಿ ನೀಡಿದರೆ ಎಲ್ಲವನ್ನು ಅನುಸರಿಸಲಾಗುವುದು ಎಂದರು.
ಚೆಮ್ಮನಾಡು ಪಂಚಾಯತ್ ಅಧ್ಯಕ್ಷೆ ಸುಫೈಜಾ ಅಬೂಬಕರ್ ಮಾತನಾಡಿ, ಜಲಜೀವನ ಮಿಷನ್ ಯೋಜನೆಯಲ್ಲಿ ಬಾವಿಕ್ಕೆರೆಯಿಂದ ಚೆಮ್ಮನಾಡು ಪಂಚಾಯತ್ ವರೆಗೆ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಅನುμÁ್ಠನಗೊಳಿಸಬೇಕು. 40 ಕುಟುಂಬಗಳಿಗೆ ಜೀವ ಫ್ಲಾಟ್ ಸಮುಚ್ಚಯ ನಿರ್ಮಾಣಕ್ಕೆ ಈ ಯೋಜನೆಯಾಗಿದ್ದು, ಜಮೀನು ಸೇರಿದಂತೆ ಪಂಚಾಯಿತಿ ವತಿಯಿಂದ ಆಗಬೇಕಿರುವ ಎಲ್ಲ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು. ಕುಡಿಯುವ ನೀರು ಪೂರೈಕೆಗೆ ಕಾಮಗಾರಿ ಪೂರ್ಣಗೊಳಿಸಲು ಸಭೆ ಸೂಚಿಸಿತು.
ಸಭೆಯಲ್ಲಿ ಕೇಂದ್ರ ಆರಂಭಿಸಿರುವ 20 ಯೋಜನೆಗಳ ಪರಿಶೀಲನೆ ನಡೆಸಲಾಯಿತು. ಸಭೆಯಲ್ಲಿ ಚೆಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಾದರ್ ಬದರಿಯಾ, ಚೆಮ್ಮನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಫೈಜಾ ಅಬೂಬಕ್ಕರ್, ಬಡತನ ನಿರ್ಮೂಲನಾ ಇಲಾಖೆ ಜಿಲ್ಲಾ ಯೋಜನಾಧಿಕಾರಿ ಕೆ.ಪ್ರದೀಪನ್, ಅಪರ ಜಿಲ್ಲಾಧಿಕಾರಿ ಕೆ.ನವೀನ್ ಬಾಬು, ಜಾರಿ ಅಧಿಕಾರಿಗಳು ಭಾಗವಹಿಸಿದ್ದರು.
ಮಂಗಲ್ಪಾಡಿ ಕಸ ಸಮಸ್ಯೆ: 3ರಂದು ವಿಶೇಷ ಸಭೆ
0
ಸೆಪ್ಟೆಂಬರ್ 30, 2022