HEALTH TIPS

ನವರಾತ್ರಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.4ರಷ್ಟು ಹೆಚ್ಚಳ

 

           ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹಾಗೂ ತುಟ್ಟಿ ಪರಿಹಾರವನ್ನು ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. 

              ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹಾಗೂ ತುಟ್ಟಿ ಪರಿಹಾರವನ್ನು ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಇದು 2022ರ ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ ಎಂದು ಹೇಳಿದ್ದಾರೆ.

                 ಇದರಿಂದ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 61 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ಕ್ರಮವಾಗಿ 12,852.56 ಕೋಟಿ ರೂ ಹಾಗೂ 8,568.36 ಕೋಟಿ ರೂ ಹೊರೆಯಾಗಲಿದೆ. ಈ ಹೆಚ್ಚಳದಿಂದಾಗಿ ಶೇ.34ರಷ್ಟಿದ್ದ ತುಟ್ಟಿಭತ್ಯೆ ಈಗ ಶೇ.38ಕ್ಕೆ ಏರಿಕೆಯಾಗಿದೆ. ಸರ್ಕಾರದ ಈ ನಿರ್ಧಾರದಿಂದ ಅಸ್ತಿತ್ವದಲ್ಲಿರುವ 50 ಲಕ್ಷ ಕೇಂದ್ರ ನೌಕರರು ಮತ್ತು 62 ಲಕ್ಷ ಪಿಂಚಣಿದಾರರಿಗೆ ನೇರ ಲಾಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

                                   ಜುಲೈ 1, 2022 ರಿಂದಲೇ ಅನ್ವಯ  
                ತುಟ್ಟಿ ಭತ್ಯೆ ಹೆಚ್ಚಳ ಜುಲೈ 1, 2022 ರಿಂದ ಅನ್ವಯವಾಗುತ್ತದೆ. ಈ ಹಿಂದೆ ಮಾರ್ಚ್ 2022 ರಲ್ಲಿ, ಜನವರಿಯಿಂದ ಡಿಎ ಹೆಚ್ಚಿಸಲು ಸರ್ಕಾರ ಘೋಷಿಸಿತ್ತು. ಆಗ ಕೇಂದ್ರ ನೌಕರರ ಡಿಎಯನ್ನು ಶೇ.31ರಿಂದ ಶೇ.34ಕ್ಕೆ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 4 ಶೇ ಹೆಚ್ಚಳವಾಗುವುದರೊಂದಿಗೆ  ತುಟ್ಟಿ ಭತ್ಯೆ ಶೇ.38ಕ್ಕೆ ಏರಿಕೆಯಾಗಿದೆ. ಇದರ ಪ್ರಕಾರ ಸೆಪ್ಟಂಬರ್ ತಿಂಗಳ ವೇತನದಲ್ಲಿ ನೌಕರರಿಗೆ ಎರಡು ತಿಂಗಳ ಡಿಎ ಅರಿಯರ್ ಸಿಗಲಿದೆ ಎಂದು ಹೇಳಲಾಗಿದೆ.

              ಲಕ್ಷಗಟ್ಟಲೆ ಉದ್ಯೋಗಿಗಳ ತುಟ್ಟಿಭತ್ಯೆ ಹೆಚ್ಚಳಕ್ಕಾಗಿ, ಕೇಂದ್ರ ಸರ್ಕಾರವು All India Consumer Price Index- Industrial Worker ಸೂಚ್ಯಂಕದ ಡೇಟಾವನ್ನು ಪರಿಗಣಿಸುತ್ತದೆ. AICPI-IW ಮೊದಲಾರ್ಧದ ಡೇಟಾದ ಆಧಾರದ ಮೇಲೆ ಜುಲೈನ DA ಅನ್ನು ಘೋಷಿಸಲಾಯಿತು. ಜೂನ್‌ನಲ್ಲಿ ಸೂಚ್ಯಂಕವು 129.2 ಕ್ಕೆ ಏರುವುದರೊಂದಿಗೆ, 4 ಶೇಕಡಾಕ್ಕೆ ಡಿಎ ಹೆಚ್ಚಳಕ್ಕೆ ದಾರಿ ಸುಗಮವಾಗಿತ್ತು. 



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries