ಕುಂಬಳೆ: ಕನ್ನಡ ಹೋರಾಟ ಸಮಿತಿಯ ವಿಶೇಷ ಸಭೆ ಸೆ.5 ರಂದು ಸೋಮವಾರ ಮಧ್ಯಾಹ್ನ 2.30 ಕ್ಕೆ ಬ್ಯಾಂಕ್ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಕಾಸರಗೋಡಿನ ಕನ್ನಡಿಗರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಕೂಲಂಕುಶ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು.
ವಿವಿಧ ಕನ್ನಡ ಪರ ಸಂಘಟನೆಗಳ, ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ಪ್ರಧಾನ ಕಾರ್ಯದರ್ಶಿ ಭಾಸ್ಕರ ಕೆ. ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸೆ.5 : ಕನ್ನಡ ಹೋರಾಟ ಸಮಿತಿ ಸಭೆ
0
ಸೆಪ್ಟೆಂಬರ್ 03, 2022