ಬದಿಯಡ್ಕ: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಸಹಯೋಗದಲ್ಲಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ, ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ, ಕಾಸರಗೋಡು ಕರ್ನಾಟಕ ಪರಿಷತ್ತು, ಕೆ.ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಅಮ್ಮ ಇವೆಂಟ್ ಮೆನೇಜ್‍ಮೆಂಟ್ ಮತ್ತು ವಿಜಿಸಿ ಪಾರೆಕಟ್ಟೆ ಇದರ ಸಹಕಾರದಲ್ಲಿ ಸೆ.11 ರಂದು ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ನಡೆಯುವ ಕಾಸರಗೋಡು ಜಿಲ್ಲಾ 6 ನೇ ಚುಟುಕು ಸಾಹಿತ್ಯ ಸಮ್ಮೇಳನ-2022 ರ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಭಾನುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು, ಸಮ್ಮೇಳನಾಧ್ಯಕ್ಷ ಚುಟುಕು ಕವಿ, ವ್ಯಂಗ್ಯ ಚಿತ್ರ ಕಲಾವಿದ ವೆಂಕಟ್ ಭಟ್ ಎಡನೀರು, ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ, ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಶ್ರೀಕಾಂತ್ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು.
ಕಾಸರಗೋಡು ಜಿಲ್ಲಾ 6 ನೇ ಚುಟುಕು ಸಾಹಿತ್ಯ ಸಮ್ಮೇಳನ : ಆಮಂತ್ರಣ ಪತ್ರಿಕೆ ಬಿಡುಗಡೆ
0
ಸೆಪ್ಟೆಂಬರ್ 05, 2022