ಕಾಸರಗೋಡು: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಉಡುಪಿ ಜಿಲ್ಲಾ ಚುಟುಕು ಸಹಿತ್ಯ ಪರಿಷತ್ ಸಹಯೋಗದೊಂದಿಗೆ ಕಾಸರಗೋಡು ಜಿಲ್ಲಾ 6ನೇ ಚುಟುಕು ಸಾಹಿತ್ಯ ಸಮ್ಮೇಳನ ಸೆ. 11ರಂದು ಕಾಸರಗೋಡು ಪರೆಕಟ್ಟದ ಕನ್ನಡಗ್ರಾಮದಲ್ಲಿ ಜರುಗಲಿದೆ.
ಬೆಳಗ್ಗೆ 10ಕ್ಕೆ ನಡೆಯುವ ಸಮಾರಂಭದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡುವರು. ಖ್ಯಾತ ಚುಟುಕು ಸಾಹಿತಿ ವೆಂಕಡಭಟ್ ಎಡನೀರು ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ಕರವಳಿ ಸಾಂಸ್ಕøತಿಕ ಪ್ರತಿಷ್ಠಾನ ಕಾಸರಗೋಡು ಹಾಗೂ ಶ್ರೀರಾಮನಾಥ ಸಾಂಸ್ಕøತಿಕ ಭವನ ಸಮಿತಿ ಕೋಟೆಕಣಿ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಕಾರ್ಯಕ್ರಮ ಜರುಗಲಿರುವುದು.
ಬೆಳಗ್ಗೆ 9.30 ಕ್ಕೆ ಕನ್ನಡ ಗ್ರಾಮಕ್ಕೆ ಸಮ್ಮೇಳನಾಧ್ಯಕ್ಷ ವೆಂಕಟ್ ಭಟ್ ಎಡನೀರು ಅವರನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಗುವುದು. 9.45 ಕ್ಕೆ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಪ್ರಧಾನ ಸಂಚಾಲಕ ಡಾ.ಎಂ.ಜಿ.ಆರ್.ಅರಸ್ ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಪುಸ್ತಕ ಪ್ರದರ್ಶನ, ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಕಲಾ ಪ್ರದರ್ಶನ ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಚುಟಕು ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಹೊಸ ಕೃತಿಗಳ ಬಿಡುಗಡೆ ಮಾಡಲಿದ್ದಾರೆ.
ಡಾ.ರಮಾನಂದ ಬನಾರಿ ಅವರಿಗೆ ಖಂಡಿಗೆ ಶಾಮ ಭಟ್ಟ ಸಾಹಿತ್ಯ ಪ್ರಶಸ್ತಿ, ಬಿ.ವಿಜಯ ಕುಮಾರ್ ಉಡುಪಿ, ಯು.ಆರ್.ಶೆಟ್ಟಿ ಮಂಗಳೂರು ಅವರಿಗೆ ಪರಿಷತ್ ಸಾಧಕ ಪ್ರಶಸ್ತಿ ಪ್ರದಾನ ನಡೆಯಲಿದೆ. ಕೃತಿ ಬೇಕಲ್, ತೃಷಾ ಜಿ.ಕೆ, ರೂಪಾ ರಾಜಪುರಂ, ಸ್ಕಂದ ಸಿ.ಎಸ್, ರಶ್ಮಿ ಪಿ.ನಾೈಕ್, ಆಶ್ರಿತ್ ಬೇಕಲ್ ಅವರಿಗೆ ಪರಿಷತ್ ಪ್ರತಿ`Á ಪುರಸ್ಕಾರ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಚುಟುಕು - ಒಂದು ಸಮೀಕ್ಷೆ-ವಿಚಾರಗೋಷ್ಠಿ, ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ, ಅಪರಾಹ್ನ 3 ಕ್ಕೆ ಸಮಾರೋಪ ಸಮಾರಂಭ ಹಾಗು ಕವಿಗಳಿಗೆ ಗೌರವಾರ್ಪಣೆ, ಸಂಜೆ 4.30 ರಿಂದ ಸಾಂಸ್ಕøತಿಕ ಉತ್ಸವ ಜರಗಲಿದೆ ಎಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು, ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಎಲ್.ಭಾರದ್ವಾಜ್ ಬೇಕಲ್, ಪ್ರಧಾನ ಕಾರ್ಯದರ್ಶಿ ಕೆ.ಜಗದೀಶ್ ಕೂಡ್ಲು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.